ಮನೆಗಳ ಮುಂದೆ ನಿಲ್ಲಿಸಿದ ಕಾರುಗಳ ಮೇಲೆ ಕಲ್ಲು ತೂರಾಟ; ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Updated on: Jan 21, 2026 | 2:21 PM

ಭರತ್ ಕಾಲೋನಿಯಲ್ಲಿ ಡೇವಿಡ್ ಎಂಬ ವ್ಯಕ್ತಿ ನಿಲ್ಲಿಸಿದ್ದ ಕಾರುಗಳ ಮೇಲೆ ಪದೇ ಪದೇ ಕಲ್ಲು ತೂರಾಟ ನಡೆಸುತ್ತಿದ್ದು, ಐದಾರು ವಾಹನಗಳಿಗೆ ಹಾನಿಯಾಗಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಡೇವಿಡ್ ಕಲ್ಲು ತೂರಿ ಓಡಿಹೋಗುವ ದೃಶ್ಯ ಸ್ಪಷ್ಟವಾಗಿ ಗೋಚರಿಸಿದೆ. ಆರ್‌ಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಈ ಹಿಂದೆಯೂ ಡೇವಿಡ್ ಇಂತಹ ಕೃತ್ಯಗಳನ್ನು ಎಸಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಬೈಕ್‌ಗಳಿಗೆ ಹಾನಿ ಮಾಡಿದ ಪ್ರಕರಣಗಳೂ ದಾಖಲಾಗಿದ್ದವು ಎಂದು ತಿಳಿದು ಬಂದಿದೆ. ಪೊಲೀಸರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ದಾವಣಗೆರೆ, ಜನವರಿ 21: ಭರತ್ ಕಾಲೋನಿಯಲ್ಲಿ ಡೇವಿಡ್ ಎಂಬ ವ್ಯಕ್ತಿ ನಿಲ್ಲಿಸಿದ್ದ ಕಾರುಗಳ ಮೇಲೆ ಪದೇ ಪದೇ ಕಲ್ಲು ತೂರಾಟ ನಡೆಸುತ್ತಿದ್ದು, ಐದಾರು ವಾಹನಗಳಿಗೆ ಹಾನಿಯಾಗಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಡೇವಿಡ್ ಕಲ್ಲು ತೂರಿ ಓಡಿಹೋಗುವ ದೃಶ್ಯ ಸ್ಪಷ್ಟವಾಗಿ ಗೋಚರಿಸಿದೆ. ಆರ್‌ಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಈ ಹಿಂದೆಯೂ ಡೇವಿಡ್ ಇಂತಹ ಕೃತ್ಯಗಳನ್ನು ಎಸಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಬೈಕ್‌ಗಳಿಗೆ ಹಾನಿ ಮಾಡಿದ ಪ್ರಕರಣಗಳೂ ದಾಖಲಾಗಿದ್ದವು ಎಂದು ತಿಳಿದು ಬಂದಿದೆ. ಪೊಲೀಸರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More