Kundapur News: ಕುಂದಾಪುರದಲ್ಲಿ ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಬಿತ್ತು ಚಪ್ಪಲಿಯೇಟು, ವಿಡಿಯೋ ನೋಡಿ

Updated on: Jun 09, 2023 | 7:02 PM

ಹಾಸ್ಟೆಲ್​ನಿಂದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಜತೆ ವ್ಯಕ್ತಿಯೊಬ್ಬ ಅಸಭ್ಯ ವರ್ತನೆ ತೋರಿ ಚಪ್ಪಲಿಯೇಟು ತಿಂದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಒಕ್ವಾಡಿಯಲ್ಲಿ ನಡೆದಿದೆ.

ಉಡುಪಿ: ಹಾಸ್ಟೆಲ್​ನಿಂದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಜತೆ ವ್ಯಕ್ತಿಯೊಬ್ಬ ಅಸಭ್ಯ ವರ್ತನೆ ತೋರಿ ಚಪ್ಪಲಿಯೇಟು ತಿಂದ ಘಟನೆ ಉಡುಪಿ (Udupi) ಜಿಲ್ಲೆಯ ಕುಂದಾಪುರ (Kundapur) ತಾಲೂಕಿನ ಒಕ್ವಾಡಿಯಲ್ಲಿ ನಡೆದಿದೆ. ಒಕ್ವಾಡಿ ರಸ್ತೆಯಲ್ಲಿ ವಿದ್ಯಾರ್ಥಿನಿ ನಡೆದುಕೊಂಡು ಹೋಗುತ್ತಿದ್ದಾಗ ನಜೀರ್ (35) ಎಂಬಾತ ಹಿಂದಿನಿಂದ ಬಂದು ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದ. ಹೆದರಿದ ವಿದ್ಯಾರ್ಥಿನಿ ಕಿರುಚಿಕೊಂಡಿದ್ದಾರೆ. ಅಷ್ಟರಲ್ಲಿ ಯುವತಿ ನೆರವಿಗೆ ಧಾವಿಸಿದ ಸ್ಥಳೀಯರು ನಜೀರ್​​ನನ್ನು ವಿಚಾರಿಸಿದ್ದಾರೆ. ನಂತರ ವಿದ್ಯಾರ್ಥಿನಿಯು ನಜೀರ್​ಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಆ ಬಳಿಕ ಸ್ಥಳಿಯರು ನಜೀರ್​​ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More