Mangaluru: ಭೂಮಿ ವಿಚಾರಕ್ಕೆ ಗಲಾಟೆ, ಕೊರಗಜ್ಜನ ಗುಡಿಗೇ ಬೆಂಕಿ ಇಟ್ಟ ವ್ಯಕ್ತಿ!

Edited By: Rakesh Nayak Manchi

Updated on: Jul 11, 2023 | 3:03 PM

ಭೂವಿ ವಿಚಾರವಾಗಿ ಗಲಾಟೆ ನಡೆದು ಕಾರ್ಣಿಕ ದೈವ ಕೊರಗಜ್ಜನ ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಇಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.

ಮಂಗಳೂರು: ಭೂಮಿ ವಿಚಾರಕ್ಕೆ ಗಲಾಟೆ ನಡೆದು ಕಾರ್ಣಿಕ ದೈವ ಕೊರಗಜ್ಜನ (Koragajja) ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಬಾಡಾರಿನಲ್ಲಿ ನಡೆದಿದೆ. ಬಾಡಾರಿನ ಕೊರಗಕಲ್ಲು ಬಳಿ ಕೊರಗಜ್ಜನ ಕಟ್ಟೆ ಇದೆ. ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕ ಹಸ್ತಕ್ಷೇಪ ಮಾಡಬಾರದೆಂದು ತಗಾದೆ ಎತ್ತಿದ್ದರು. ಈ ತಗಾದೆ ಕೆಲವು ವರ್ಷಗಳಿಂದ ಏರ್ಪಟ್ಟಿತ್ತು. ಆದರೀಗ ಆ ವ್ಯಕ್ತಿ ಗುಡಿಗೆ ಬೆಂಕಿ ಹಚ್ಚಿದ್ದು, ಇದನ್ನು ಖಂಡಿಸಿದ ಸ್ವಾಮಿ ಕೊರಗಜ್ಜ ಸಮಿತಿಯು ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More