ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ! ಸಿಸಿಟಿವಿ ವಿಡಿಯೋದಿಂದಾಗಿ ಸಿಕ್ಕಿಬಿದ್ದ ಆರೋಪಿ

Edited By:

Updated on: Jul 11, 2025 | 11:38 AM

ದಿನಸಿ ಖರೀದಿ ಮಾಡಿದ್ದರ ಸಾಲ ವಾಪಸ್ ಕೊಡುವಂತೆ ಅಂಗಡಿ ಮಾಲೀಕ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಅಂಗಡಿಗೇ ಬೆಂಕಿಹಚ್ಚಲು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಡೆದಿದೆ. ಆರೋಪಿಯು ಅಂಗಡಿ ಸಮೀಪದ ಫ್ಲೆಕ್ಸ್​​ಗೆ ಬೆಂಕಿಹಚ್ಚಿದ್ದಾನೆ. ಘಟನೆಯ ದೃಶ್ಯ ಸಿಸಿಟಿವಿಲಿ ಸೆರೆಯಾಗಿದ್ದು, ಇದರ ಆಧಾರದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು, ಜುಲೈ 11: ದಿನಸಿಯ ಸಾಲ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಅಂಗಡಿಗೇ ಬೆಂಕಿಹಚ್ಚಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಡೆದಿದೆ. ಸಿಸಿಟಿವಿಲಿ ಸೆರೆಯಾದ ದೃಶ್ಯದ ಆಧಾರದಲ್ಲಿ ಸದ್ಯ ಬೆಳ್ತಂಗಡಿ ಪೊಲೀಸರು ಆರೋಪಿ ಉಮೇಶ್ ಬಂಗೇರಾನನ್ನು ಬಂಧಿಸಿದ್ದಾರೆ. ಈ ಹಿಂದೆ ಹೋಟೆಲ್ ನಡೆಸುತ್ತಿದ್ದಾಗ ಉಮೇಶ್ ಬಂಗೇರಾ, ಗುರುವಾಯನಕೆರೆಯ ಸದಕತುಲ್ಲಾ ಎಂಬಾತನ ದಿನಸಿ ಅಂಗಡಿಯಿಂದ 38,000 ರೂ. ಸಾಲ ಪಡೆದಿದ್ದ. ದೂರವಾಣಿ ಕರೆ ಮಾಡಿದ್ದ ಸದಕತುಲ್ಲಾ, ಹಳೇ ಬಾಕಿ ತೀರಿಸುವಂತೆ ಆಗ್ರಹಿಸಿದ್ದ‌. ಇದರಿಂದ ಕೋಪಗೊಂಡ ಉಮೇಶ್ ಅಂಗಡಿ ಮುಂಭಾಗ ಹಾಕಿದ್ದ ಫ್ಲೆಕ್ಸ್​ಗೆ ಬೆಂಕಿ ಹಾಕಿದ್ದಾನೆ. ಇದರಿಂದ 3 ಸಾವಿರ ನಷ್ಟ ಆಗಿದೆ ಎಂದು ಅಂಗಡಿ ಮಾಲೀಕ ದೂರು ನೀಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More