ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವೈರಲ್ ವಿಡಿಯೋಗೆ ಆಕ್ರೋಶ
ಈ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ಭಾರತೀಯ ರೈಲ್ವೆಯನ್ನು ಒತ್ತಾಯಿಸುತ್ತೇವೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಅಧಿಕಾರಿಗಳು ಅವನನ್ನು ಗುರುತಿಸಿ ಸೂಕ್ತ ದಂಡ ವಿಧಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಅದರಲ್ಲೂ ವಿಶೇಷವಾಗಿ ರೈಲುಗಳಲ್ಲಿ ಸ್ವಚ್ಛತೆ ಮತ್ತು ಶಿಸ್ತನ್ನು ಕಾಪಾಡಿಕೊಳ್ಳುವುದು ಎಲ್ಲಾ ಪ್ರಯಾಣಿಕರ ಕರ್ತವ್ಯ ಎಂದು ಕರ್ನಾಟಕ ಪೋರ್ಟ್ ಪೋಲಿಯೋ ತನ್ನ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ.
ಬೆಂಗಳೂರು, (ಮಾರ್ಚ್ 15): ಗುವಾಹಟಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ವಿಚಿತ್ರವಾದ ಘಟನೆ ನಡೆದಿದೆ. ವಿಶಾಖಪಟ್ಟಣ (ವೈಜಾಗ್) ಮತ್ತು ಪೆರಂಬೂರು ನಡುವೆ ಚಲಿಸುವ ರೈಲಿನೊಳಗೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂತಹ ವರ್ತನೆ ನಾಗರಿಕ ಪ್ರಜ್ಞೆಯನ್ನು ಉಲ್ಲಂಘಿಸುವುದಲ್ಲದೆ, ಭಾರತೀಯ ರೈಲ್ವೆಯ ಸ್ವಚ್ಛತೆ ಮತ್ತು ನೈರ್ಮಲ್ಯದ ಮಾನದಂಡಗಳನ್ನು ಸಹ ನಿರ್ಲಕ್ಷಿಸುತ್ತದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ಭಾರತೀಯ ರೈಲ್ವೆಯನ್ನು ಒತ್ತಾಯಿಸುತ್ತೇವೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಅಧಿಕಾರಿಗಳು ಅವನನ್ನು ಗುರುತಿಸಿ ಸೂಕ್ತ ದಂಡ ವಿಧಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಅದರಲ್ಲೂ ವಿಶೇಷವಾಗಿ ರೈಲುಗಳಲ್ಲಿ ಸ್ವಚ್ಛತೆ ಮತ್ತು ಶಿಸ್ತನ್ನು ಕಾಪಾಡಿಕೊಳ್ಳುವುದು ಎಲ್ಲಾ ಪ್ರಯಾಣಿಕರ ಕರ್ತವ್ಯ ಎಂದು ಕರ್ನಾಟಕ ಪೋರ್ಟ್ ಪೋಲಿಯೋ ತನ್ನ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ