ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ

Updated on: Jan 07, 2026 | 9:08 PM

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಜನವರಿ 9ರಂದು ಅದ್ದೂರಿಯಾಗಿ ರಿಲೀಸ್ ಆಗಲಿದೆ. ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಚಿತ್ರ ಜನವರಿ 12ಕ್ಕೆ ತೆರೆಕಾಣಲಿದೆ. ಟಿಕೆಟ್ ದರ ಹೆಚ್ಚಳ ಆಗಿರುವುದರಿಂದ ಎರಡೂ ಸಿನಿಮಾಗಳಿಂದ ಭರ್ಜರಿ ಕಲೆಕ್ಷನ್ ನಿರೀಕ್ಷಿಸಲಾಗುತ್ತಿದೆ.

ಆಂಧ್ರ ಮತ್ತು ತೆಲಂಗಾಣದಲ್ಲಿ ಸಿನಿಮಾಗಳ ಟಿಕೆಟ್ ದರವನ್ನು ಏಕಾಏಕಿ ಹೆಚ್ಚಿಸಲು ಅವಕಾಶ ಇಲ್ಲ. ಆದರೆ ದೊಡ್ಡ ಸಿನಿಮಾಗಳು ಬಂದಾಗ ವಿಶೇಷ ಅನುಮತಿ ಪಡೆದು ಟಿಕೆಟ್ ದರ ಹೆಚ್ಚಿಸಲಾಗುತ್ತದೆ. ಈಗ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ (The Raja Saab) ಹಾಗೂ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾಗಳಿಗೆ ಅವಕಾಶ ಸಿಕ್ಕಿದೆ. ‘ದಿ ರಾಜಾ ಸಾಬ್’ ಸಿನಿಮಾ ಜನವರಿ 9ರಂದು ಬಿಡುಗಡೆ ಆಗಲಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳಷ್ಟು ನಿರೀಕ್ಷೆ ಇದೆ. ಮಾರುತಿ ನಿರ್ದೇಶನದ ಈ ಚಿತ್ರದಲ್ಲಿ ಹಾರರ್ ಕಥಾಹಂದರ ಇದೆ. ಚಿರಂಜೀವಿ ಅವರ ‘ಮನ ಶಂಕರ ವರಪ್ರಸಾದ್ ಗಾರು’ (Mana Shankara Vara Prasad Garu) ಸಿನಿಮಾ ಜನವರಿ 12ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾ ಕೂಡ ಸಾಕಷ್ಟು ಹೈಪ್ ಸೃಷ್ಟಿ ಮಾಡಿದೆ. ಟಿಕೆಟ್ ದರ ಹೆಚ್ಚಳ ಆಗಿರುವುದರಿಂದ ಭರ್ಜರಿ ಕಲೆಕ್ಷನ್ ನಿರೀಕ್ಷಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More