ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್

Updated on: Oct 07, 2026 | 1:10 PM

ತೆಲುಗು ಚಿತ್ರರಂಗದ ಜನಪ್ರಿಯ ನಟ ಮಂಚು ಮನೋಜ್ ಹಾಗೂ ಅವರ ಕುಟುಂಬದವರು ಇಂದು (ಅಕ್ಟೋಬರ್ 07) ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಮಂಚು ಮನೋಜ್ ತಮ್ಮ ಪತ್ನಿ ಮತ್ತು ಮಕ್ಕಳೊಡನೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಮಂಚು ಮನೋಜ್ ಅವರು ಖ್ಯಾತ ನಟ ಮೋಹನ್​​ಬಾಬು ಅವರ ಪುತ್ರನಾಗಿದ್ದು, ತೆಲುಗಿನ ಹಲವಾರು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ.

ತೆಲುಗು ಚಿತ್ರರಂಗದ ಜನಪ್ರಿಯ ನಟ ಮಂಚು ಮನೋಜ್ ಹಾಗೂ ಅವರ ಕುಟುಂಬದವರು ಇಂದು (ಅಕ್ಟೋಬರ್ 07) ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಮಂಚು ಮನೋಜ್ ತಮ್ಮ ಪತ್ನಿ ಮತ್ತು ಮಕ್ಕಳೊಡನೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಮಂಚು ಮನೋಜ್ ಅವರು ಖ್ಯಾತ ನಟ ಮೋಹನ್​​ಬಾಬು ಅವರ ಪುತ್ರನಾಗಿದ್ದು, ತೆಲುಗಿನ ಹಲವಾರು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಕರ್ನಾಟಕದೊಂದಿಗೆ ಒಳ್ಳೆಯ ನಂಟು ಹೊಂದಿರುವ ಮಂಚು ಮನೋಜ್, ಪುನೀತ್ ರಾಜ್​​ಕುಮಾರ್ ನಿಧನರಾದಾಗಲೂ ಸಹ ಆಗಮಿಸಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಮಂಚು ಮನೋಜ್ ಮತ್ತು ಕುಟುಂಬದವರು ಚಾಮುಂಡಿ ದೇವಾಲಯಕ್ಕೆ ಭೇಟಿ ನೀಡಿದ ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More