ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್
ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಸಚಿವ ಚಲುವರಾಯಸ್ವಾಮಿ ಅವರು ಉತ್ಸಾಹದಿಂದ ನೃತ್ಯ ಮಾಡಿದ್ದು, ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಗಣಿಗ ರವಿ ಅವರೂ ಸೇರಿ ಕುಣಿದರು. ಲಕ್ಷಾಂತರ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮ್ಮೇಳನದ ಯಶಸ್ಸನ್ನು ಆಚರಿಸುವ ಸಂಭ್ರಮದಲ್ಲಿ ಸಚಿವರು ಕುಣಿದರು.
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಶನಿವಾರ ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಸಂಗೀತ ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದರು. ಅಧ್ಯಕ್ಷ ಅಧ್ಯಕ್ಷ ಹಾಡಿಗೆ ಸಚಿವ ಚಲುವರಾಯಸ್ವಾಮಿ ಜೊತೆ, ಶಾಸಕರಾದ ನರೇಂದ್ರ ಸ್ವಾಮಿ, ಗಣಿಗ ರವಿ ಕುಣಿದು ಕುಪ್ಪಳಿಸಿದರು. ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಸೇರಿದ್ದರು. ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಅಭೂತಪೂರ್ವ ಯಶಸ್ಸು ಕಂಡ ಖುಷಿಗೆ ಸಚಿವ ಚಲುವರಾಯಸ್ವಾಮಿ ಕುಣಿದು ಕುಪ್ಪಳಿಸಿದರು.
Loading...
Unable to load recommendations.
Follow Us