ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ: ಪವಾಡಸದೃಶ ಪಾರಾದ ಮಂಡ್ಯದ 33 ಮಾಲಾಧಾರಿಗಳು

Edited By:

Updated on: Nov 18, 2025 | 9:42 PM

ಮಂಡ್ಯ ಜಿಲ್ಲೆಯ ಯಾಲದಹಳ್ಳಿ ಕೊಪ್ಪಲು ಗ್ರಾಮದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಕೇರಳದ ಎರುಮೇಲಿ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್‌ನಲ್ಲಿದ್ದ 33 ಅಯ್ಯಪ್ಪ ಮಾಲಾಧಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾದ ಭಕ್ತರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಮಂಡ್ಯ, ನವೆಂಬರ್​ 18: ಶಬರಿಮಲೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ 33 ಮಾಲಾಧಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಡೆದಿದೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮೇಲಿ ಬಳಿ ಅಪಘಾತ ಸಂಭವಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More