‘ತಂಗಿ ತಂಗಿ ಎನ್ನುತ್ತಿದ್ದವನ ಜತೆಗೇ ಓಡಿಹೋಗಿ ಮದುವೆಯಾದ್ಳು!’ ಪತ್ನಿಯ ವಂಚನೆ ಬಗ್ಗೆ ಪತಿಯ ಅಳಲು

Edited By:

Updated on: Apr 22, 2026 | 10:37 AM

ಮಂಡ್ಯದಲ್ಲಿ ಆಟೋ ಚಾಲಕ ಸಾಗರ್ ಪತ್ನಿ ರಕ್ಷಿತಾ, ವಿವಾಹವಾದ ಎರಡೇ ವರ್ಷಕ್ಕೆ ಸಾಗರ್ ಸ್ನೇಹಿತ ಇಂದ್ರ ಎಂಬಾತನ ಜತೆ ಓಡಿಹೋಗಿ ಮದುವೆಯಾಗಿದ್ದಾರೆ. ಈ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ರಕ್ಷಿತಾ 22 ಗ್ರಾಂ ಚಿನ್ನ ಮತ್ತು 1 ಲಕ್ಷ ರೂಪಾಯಿ ನಗದು ತೆಗೆದುಕೊಂಡು ಹೋಗಿದ್ದಾರೆಂದು ಸಾಗರ್ ಆರೋಪಿಸಿದ್ದಾರೆ. ನ್ಯಾಯಕ್ಕಾಗಿ ಸಾಗರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಮಂಡ್ಯ, ಏಪ್ರಿಲ್ 22: ಪ್ರೀತಿಸಿ ಮದುವೆಯಾದ ಆಟೋ ಚಾಲಕ ಸಾಗರ್ ಎಂಬವರ ಪತ್ನಿ ಗಂಡನ ಸ್ನೇಹಿತನ ಜತೆ ಓಡಿಹೋಗಿ ಮದುವೆಯಾದ ವಿಲಕ್ಷಣ ಘಟನೆ ಮಂಡ್ಯದ ಬನ್ನಂಗಾಡಿ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಆಟೋ ಚಾಲಕ ಸಾಗರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ‘ಪ್ರೀತಿಸಿ ಮದುವೆಯಾದ ರಕ್ಷಿತಾ, ತಂಗಿ ತಂಗಿ ಎನ್ನುತ್ತಿದ್ದವನ ಜತೆಗೇ ಓಡಿಹೋಗಿದ್ದಾಳೆ’ ಎಂದು ಸಾಗರ್ ಆರೋಪಿಸಿದ್ದಾರೆ. ರಕ್ಷಿತಾ 22 ಗ್ರಾಂ ಚಿನ್ನ ಮತ್ತು 1 ಲಕ್ಷ ರೂಪಾಯಿ ನಗದು ತೆಗೆದುಕೊಂಡು ಹೋಗಿದ್ದಾರೆಂದು ಸಾಗರ್ ಆರೋಪಿಸಿದ್ದಾರೆ. ಪತ್ನಿಯ ಬಗ್ಗೆ ಸಾಗರ್ ಮಾಡಿರುವ ಆರೋಪಗಳು ಈ ವಿಡಿಯೋದಲ್ಲಿದೆ.

ವಿವರಗಳಿಗೆ ಓದಿ: ಮದುವೆಯಾದ ಎರಡೇ ವರ್ಷಕ್ಕೆ ಪತಿಯ ಸ್ನೇಹಿತನ ಜತೆ ಮಹಿಳೆ ಪರಾರಿ! ದೇಗುಲದಲ್ಲಿ ಮದುವೆಯಾಗಿ ಫೋಟೋ ಸ್ಟೇಟಸ್ ಹಾಕಿದ ಕಿಲಾಡಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More