ಸ್ಥಳೀಯ ಸಂಸ್ಥೆ ಚುನಾವಣೆ: JDS ಜೊತೆ ಮೈತ್ರಿಗೆ ಮಂಡ್ಯದಲ್ಲಿ ಬಿಜೆಪಿಗರ ಅಪಸ್ವರ

Edited By:

Updated on: Jan 07, 2026 | 12:38 PM

ಮಂಡ್ಯ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಾಗಿ ಜೆಡಿಎಸ್ ಜೊತೆಗಿನ ಮೈತ್ರಿಗೆ ಬಿಜೆಪಿ ನಾಯಕರಿಂದ ವಿರೋಧ ವ್ಯಕ್ತವಾಗಿದೆ. ಮಾಜಿ ಸಂಸದೆ ಸುಮಲತಾ ಮತ್ತು ಕೆ.ಸಿ. ನಾರಾಯಣ ಗೌಡ ಸೇರಿದಂತೆ ಜಿಲ್ಲೆಯ ಮುಖಂಡರು ರಾಜ್ಯ ನಾಯಕರ ಬಳಿ ಈ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವತಂತ್ರವಾಗಿ ಬಿಜೆಪಿ ಸ್ಪರ್ಧಿಸಬೇಕೆಂದು ಆಗ್ರಹಿಸಿದ್ದಾರೆ.

ಮಂಡ್ಯ, ಜನವರಿ, 07: ಜಿಲ್ಲೆಯಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಯನ್ನು ಬಿಜೆಪಿ ನಾಯಕರು ತೀವ್ರವಾಗಿ ವಿರೋಧಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಕೋರ್ ಕಮಿಟಿ ಸದಸ್ಯರ ಮುಂದೆ ಈ ಕುರಿತು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಮಾಜಿ ಸಂಸದೆ ಸುಮಲತಾ ಅಂಬರೀಷ್ ಮತ್ತು ಮಾಜಿ ಸಚಿವ ಕೆ.ಸಿ. ನಾರಾಯಣ ಗೌಡ ಹಾಗೂ ಜಿಲ್ಲೆಯ ಇತರ ಪರಾಜಿತ ಅಭ್ಯರ್ಥಿಗಳು ಇದಕ್ಕೆ ದನಿಗೂಡಿಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಬೇಕೆಂದು ಆಗ್ರಹಿಸಲಾಗಿದೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಇದ್ದರೂ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಹಿತಾಸಕ್ತಿ ಕಾಪಾಡಲು ಮೈತ್ರಿ ಸಾಧ್ಯವಿಲ್ಲ ಎಂಬುದು ಅವರ ವಾದವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.