ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಆರ್ ಅಶೋಕ ವಿರುದ್ಧ ಬಿಜೆಪಿ ಕಾರ್ಯಕರ್ತರಲ್ಲಿ ಹೆಚ್ಚಿದ ಅಸಮಾಧಾನ, ಬದಲಾಯಿಸುವಂತೆ ಒತ್ತಡ

ಅರುಣ್​ ಕುಮಾರ್​ ಬೆಳ್ಳಿ

Updated on: Jan 28, 2023 | 11:27 AM

ಅಶೋಕ ಯಾವತ್ತೂ ಮಂಡ್ಯ ಜಿಲ್ಲೆಗೆ ಕನೆಕ್ಟ್ ಆದವರಲ್ಲ. ಮಂಡ್ಯದಲ್ಲಿ ಅವರು ಖಂಡಿತ ಜನಪ್ರಿಯ ನಾಯಕರಲ್ಲ. ಹಳೇ ಮೈಸೂರು ಭಾಗದ ಪ್ರತಿನಿಧಿಯೊಬ್ಬರಿಗೆ ಮಂಡ್ಯ ಜಿಲ್ಲೆಯ ಉಸ್ತುವಾರಿ ನೀಡಿದ್ದರೆ ಚೆನ್ನಾಗಿರುತಿತ್ತೇನೋ?

ಮಂಡ್ಯ: ರಾಜ್ಯ ಕಂದಾಯ ಮತ್ತು ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಆರ್ ಅಶೋಕ (R Ashoka) ಮತ್ತು ಪಕ್ಷದ ಜಿಲ್ಲಾ ಕಾರ್ಯಕರ್ತರ (party workers) ನಡುವೆ ಅದ್ಯಾವ ಕಾರಣಕ್ಕೆ ಮುನಿಸು ಹುಟ್ಟಿದೆಯೋ ಗೊತ್ತಿಲ್ಲ ಮಾರಾಯ್ರೇ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಶೋಕ ವಿರುದ್ಧ ಕಾರ್ಯಕರ್ತರ ಅಸಮಾಧಾನ, ಸಿಡಿಮಿಡಿ ಹೆಚ್ಚಾಗಿ ಅವರನ್ನು ಬದಲಾಯಿಸುವಂತೆ ಒತ್ತಡ ಹೇರಲಾಗುತ್ತಿದೆ. ಬೆಂಗಳೂರು-ಮೈಸೂರು ಹೆದ್ದಾರಿಯ ಫ್ಲೈಓವರ್ ಮತ್ತು ಬೇರೆ ಗೋಡೆಗಳ ಮೇಲೆ ಗೋ ಬ್ಯಾಕ್ ಅಶೋಕ (go back Ashoka) ಅಂತ ಬರೆದಿರುವುದು ಇದಕ್ಕೆ ಸಾಕ್ಷಿಯಾಗಿದೆ. ಹಾಗೆ ನೋಡಿದರೆ, ಅಶೋಕ ಯಾವತ್ತೂ ಮಂಡ್ಯ ಜಿಲ್ಲೆಗೆ ಕನೆಕ್ಟ್ ಆದವರಲ್ಲ. ಮಂಡ್ಯದಲ್ಲಿ ಅವರು ಖಂಡಿತ ಜನಪ್ರಿಯ ನಾಯಕರಲ್ಲ. ಹಳೇ ಮೈಸೂರು ಭಾಗದ ಪ್ರತಿನಿಧಿಯೊಬ್ಬರಿಗೆ ಮಂಡ್ಯ ಜಿಲ್ಲೆಯ ಉಸ್ತುವಾರಿ ನೀಡಿದ್ದರೆ ಚೆನ್ನಾಗಿರುತಿತ್ತೇನೋ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.