ಮಂಡ್ಯದ ಯರಹಳ್ಳಿ ಬಳಿ ವಿಸಿ ನಾಲೆಗೆ ಬಿದ್ದ ಕಾರು: ಚಾಲಕ ಜಸ್ಟ್ ಬಚಾವ್!
ಮಂಡ್ಯದ ಯರಹಳ್ಳಿ ಬಳಿ ವಿಸಿ ನಾಲೆಗೆ ಕಾರೊಂದು ಪತನಗೊಂಡಿದೆ. ಅದೃಷ್ಟವಶಾತ್ ಚಾಲಕ ಕೃಷ್ಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಮಯಪ್ರಜ್ಞೆಯಿಂದ ಅವರು ಬಚಾವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಕಾರನ್ನು ಮೇಲಕ್ಕೆತ್ತಿದ್ದಾರೆ. ಚಿಕ್ಕ ರಸ್ತೆಗಳು ಹಾಗೂ ತಡೆಗೋಡೆಗಳ ಕೊರತೆ ಇಂತಹ ಘಟನೆಗಳಿಗೆ ಕಾರಣವೆಂದು ಹೇಳಲಾಗಿದೆ. ಘಟನಾ ಸ್ಥಳ ಮತ್ತು ಕಾರಿನ ರಕ್ಷಣೆ ಮಾಡುತ್ತಿರುವ ವಿಡಿಯೋ ಇಲ್ಲಿದೆ.
ಮಂಡ್ಯ, ನವೆಂಬರ್ 3: ಮಂಡ್ಯ ಜಿಲ್ಲೆಯ ಯರಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರೊಂದು ಬಿದ್ದಿದ್ದು, ಕಾರು ಚಾಲಕ ಕೃಷ್ಣ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನಾಲೆಗೆ ಬಿದ್ದ ತಕ್ಷಣವೇ ಚಾಲಕ ಸಮಯಪ್ರಜ್ಞೆ ಮೆರೆದು ಕಾರಿನಿಂದ ಹೊರಬಂದಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ನಾಲೆಗೆ ಬಿದ್ದಿದ್ದ ಕಾರನ್ನು ಮೇಲಕ್ಕೆತ್ತಿದ್ದಾರೆ. ಈ ಘಟನೆಯು ಸ್ಥಳೀಯ ರಸ್ತೆಗಳಲ್ಲಿನ ಸುರಕ್ಷತಾ ಲೋಪಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವಿಸಿ ನಾಲೆಗಳ ಅಕ್ಕಪಕ್ಕದಲ್ಲಿರುವ ರಸ್ತೆಗಳು ಅತ್ಯಂತ ಚಿಕ್ಕದಾಗಿವೆ ಮತ್ತು ಯಾವುದೇ ತಡೆಗೋಡೆಗಳಿಲ್ಲದೆ ಅಪಾಯಕಾರಿಯಾಗಿವೆ. ಈ ಹಿನ್ನೆಲೆಯಲ್ಲಿ, ಈ ರೀತಿಯ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
