ಮಂಡ್ಯ: ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಗಲಾಟೆ, ನಗರಸಭೆ ಕಚೇರಿ ಎದುರು ಹೈಡ್ರಾಮಾ

ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಮಂಡ್ಯ ನಗರಸಭೆ ಕಚೇರಿ ಮುಂಭಾಗ ಹೈಡ್ರಾಮಾ ನಡೆಯಿತು. ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಜೆಡಿಎಸ್ ಸದಸ್ಯರಿದ್ದ ಬಸ್ ಒಳಗೆ ಬಿಡದ ಹಿನ್ನೆಲೆಯಲ್ಲಿ ಕಾಂಗ್ರೆಸ್​​ ಶಾಸಕ ಗಣಿಗ ರವಿಕುಮಾರ್ ‌ಜೊತೆ ಮಾತಿನ ಚಕಮಕಿ ನಡೆಯಿತು. ಇದೇ ವೇಳೆ, ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಸ್ಥಳಕ್ಕೆ ಆಗಮಿಸಿದರು.

ಮಂಡ್ಯ: ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಗಲಾಟೆ, ನಗರಸಭೆ ಕಚೇರಿ ಎದುರು ಹೈಡ್ರಾಮಾ
| Updated By: ಗಣಪತಿ ಶರ್ಮ

Updated on: Aug 28, 2024 | 12:51 PM

ಮಂಡ್ಯ, ಆಗಸ್ಟ್ 28: ಲೋಕಸಭೆ ಚುನಾವಣೆ ಬಳಿಕ ಇದೀಗ ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಜೆಡಿಎಸ್ ಹಾಗೂ ಕಾಂಗ್ರೆಸ್​​ಗೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿವೆ. ಅಧ್ಯಕ್ಷಗಾದಿ ಹಿಡಿಯಲು ಮತ್ತೆ ಬದ್ಧ ವೈರಿಗಳ ನಡುವೆ ಮೆಗಾ ಫೈಟ್ ನಡೆಯುತ್ತಿದೆ. ಅಧಿಕಾರ ಉಳಿಸಿಕೊಳ್ಳುವುದು ಕೇಂದ್ರ ಸಚಿವ ಕುಮಾರಸ್ವಾಮಿಗೆ ಪ್ರತಿಷ್ಠೆಯಾಗಿದೆ. 35 ಸದಸ್ಯ ಬಲದ ಮಂಡ್ಯ ನಗರಸಭೆಗೆ 2 ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯುತ್ತಿದೆ. 2ನೇ ಅವಧಿಗೂ ಅಧ್ಯಕ್ಷಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎ ವರ್ಗಕ್ಕೆ ಮೀಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us