AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್: ಅನುಮತಿ ಕೊಟ್ಟಿದ್ದು ನೀವೇನಾ? ಎಂದು ಪ್ರಿಯಾಂಕ ಖರ್ಗೆಗೆ ಬಿಜೆಪಿ ಪ್ರಶ್ನೆ

ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್: “ಅನುಮತಿ ಕೊಟ್ಟಿದ್ದು ನೀವೇನಾ?” ಎಂದು ಪ್ರಿಯಾಂಕ ಖರ್ಗೆಗೆ ಬಿಜೆಪಿ ಪ್ರಶ್ನೆ

ದಿಲೀಪ್​, ಚೌಡಹಳ್ಳಿ
| Edited By: |

Updated on: Nov 18, 2026 | 12:10 PM

Share

ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡ ಮಂಡ್ಯ ಗಿರೀಶ್ ಅವರು ಬೆಂಗಳೂರು-ಮೈಸೂರು ಹಳೆ ಹೆದ್ದಾರಿಯಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಯಿತು. ಈ ಘಟನೆಗೆ ಮಂಡ್ಯ ಜಿಲ್ಲಾ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅಧಿಕಾರದ ದುರುಪಯೋಗದ ಆರೋಪದೊಂದಿಗೆ ತೀವ್ರ ವಾಗ್ದಾಳಿ ನಡೆಸಿದೆ.

ಮಂಡ್ಯ, ನ.18: ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಬೆಂಗಳೂರು-ಮೈಸೂರು ಹಳೆ ಹೆದ್ದಾರಿಯಲ್ಲಿ ಪೆಂಡಲ್ ಹಾಕಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಮಂಡ್ಯದ ಕಾಂಗ್ರೆಸ್ ಮುಖಂಡ ಮಂಡ್ಯ ಗಿರೀಶ್ ಅವರ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕುರಿತು ವೀಡಿಯೋ ಹಂಚಿಕೊಂಡಿರುವ ಮಂಡ್ಯ ಜಿಲ್ಲಾ ಬಿಜೆಪಿ, ಗೃಹ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಆಡಳಿತ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದೆ. ಮಂಡ್ಯದ ಪ್ರಮುಖ ವೃತ್ತವಾದ ಸಂಜಯ್ ವೃತ್ತದ ಬಳಿ, ಅಂದರೆ ಬೆಂಗಳೂರು-ಮೈಸೂರು ಹಳೆ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡ ಮಂಡ್ಯ ಗಿರೀಶ್ ಅವರು ನಿನ್ನೆ (ನವೆಂಬರ್ 17) ತಮ್ಮ ಹುಟ್ಟುಹಬ್ಬವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ರಸ್ತೆ ಬದಿಯಲ್ಲಿ ಪೆಂಡಲ್ ಹಾಕಿ ಬೃಹತ್ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿದ್ದರಿಂದ ಸಾರ್ವಜನಿಕರಿಗೆ ಮತ್ತು ಸಂಚಾರಕ್ಕೆ ತೀವ್ರ ತೊಂದರೆಯಾಯಿತು ಎಂದು ಸಾರ್ವಜನಿಕ ವಲಯದಲ್ಲೂ ಆಕ್ರೋಶ ವ್ಯಕ್ತವಾಗಿದೆ. ರಸ್ತೆ ಬದಿಯಲ್ಲಿ ಪೆಂಡಲ್ ಹಾಕಿ ಬೃಹತ್ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿದ್ದರಿಂದ ಸಾರ್ವಜನಿಕರಿಗೆ ಮತ್ತು ಸಂಚಾರಕ್ಕೆ ತೀವ್ರ ತೊಂದರೆಯಾಯಿತು ಎಂದು ಸಾರ್ವಜನಿಕ ವಲಯದಲ್ಲೂ ಆಕ್ರೋಶ ವ್ಯಕ್ತವಾಗಿದೆ. “ಆರ್‌ಎಸ್‌ಎಸ್ (RSS) ಕಾರ್ಯಕ್ರಮಗಳಿಗೆ ಅನುಮತಿ ಕೊಡಲ್ಲ ಅಂತೀರಾ, ಆದರೆ ಸಾರ್ವಜನಿಕ ಹೆದ್ದಾರಿಯಲ್ಲಿ ಪೆಂಡಲ್ ಹಾಕಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಅನುಮತಿ ಕೊಟ್ಟಿದ್ದು ನೀವೇನಾ (ಗೃಹ ಸಚಿವರೇ)? ಅಥವಾ ನಗರಸಭೆಯವರಾ, ಜಿಲ್ಲಾಡಳಿತದವರಾ? ಇದು ಅಧಿಕಾರದ ಮದವಲ್ಲದೆ ಮತ್ತೇನು?” ಎಂದು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More