ಡಿಜೆಗೆ ಪೊಲೀಸರಿಂದ ಅನುಮತಿ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಮಂಡ್ಯ ಜಿಲ್ಲೆಯ ಕೆ.ಬೆಟ್ಟಹಳ್ಳಿಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಗೆ ಡಿಜೆ ಬಳಕೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಭಕ್ತರು ಗಣೇಶ ಮೂರ್ತಿಯನ್ನು ಮೈಸೂರು-ಚನ್ನರಾಯಪಟ್ಟಣ ಹೆದ್ದಾರಿಯಲ್ಲಿಟ್ಟು ಧರಣಿ ನಡೆಸಿದ್ದಾರೆ. ಪರಿಣಾಮ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಪೊಲೀಸರ ನಡೆ ವಿರುದ್ಧ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯ, ಸೆಪ್ಟೆಂಬರ್ 14: ಗಣೇಶ ಮೆರವಣಿಗೆ ವೇಳೆ ಡಿಜೆ ಬಳಕೆಗೆ ಅನುಮತಿ ನೀಡದ ಹಿನ್ನೆಲೆ ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ ನಡೆಸಿರುವ ಪ್ರಸಂಗ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದು ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಗ್ರಾಮಸ್ಥರು ಸಂಜೆ ವೇಳೆಗೆ ಡಿಜೆ ಮೂಲಕ ವಿಸರ್ಜನಾ ಮೆರವಣಿಗೆಗೆ ಮುಂದಾಗಿದ್ದರು. ಆದರೆ ಡಿಜೆ ಬಳಕೆಗೆ ಅನುಮತಿ ನೀಡಿಲ್ಲ ಎಂದು ಪೊಲೀಸರು ತಿಳಿಸಿದ ಕಾರಣ ರೊಚ್ಚಿಗೆದ್ದು ಗಣೇಶ ಮೂರ್ತಿ ಹೆದ್ದಾರಿಯಲ್ಲಿ ಇಟ್ಟು ಭಕ್ತರು ಧರಣಿ ನಡೆಸಿದ್ದಾರೆ. ಪರಿಣಾಮ ಮೈಸೂರು-ಚನ್ನರಾಯಪಟ್ಟಣ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 14, 2026 10:21 PM
Follow Us
Latest Videos

