ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಮಂಡ್ಯ ಅಭಿಮಾನಿ

Edited By:

Updated on: Sep 29, 2024 | 5:30 PM

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್​ ದಾಖಲಾಗಿದೆ. ರಾಜೀನಾಮೆ ನೀಡುವಂತೆ ಆಗ್ರಹ ಕೇಳಿಬರುತ್ತಿದೆ. ಈ ನಡುವೆ ಮಂಡ್ಯದ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ರಾಜೀನಾಮೆ ನೀಡದಂತೆ ತಮ್ಮ ರಕ್ತದಲ್ಲಿ ಪತ್ರ ಬರೆದಿದ್ದಾರೆ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ಹೇಳಿದ್ದಾರೆ.

ಮಂಡ್ಯ, ಸೆಪ್ಟೆಂಬರ್​ 29: ಮುಡಾ ಹಗರಣದಲ್ಲಿ ನೀವು ರಾಜೀನಾಮೆ ನೀಡಬಾರದು. ನಿಮ್ಮೊಂದಿಗೆ ನಾವಿದ್ದೇವೆ ಎಂದು ರಕ್ತದಲ್ಲಿ ಅಭಿಮಾನಿ ಒಬ್ಬರು ಸಿಎಂ ಸಿದ್ದರಾಮಯ್ಯಗೆ (Siddaramaiah) ರಕ್ತದಲ್ಲಿ ಪತ್ರ ಬರೆದಿದ್ದಾರೆ. ಜಿಲ್ಲೆಯ ಮೊತ್ತಹಳ್ಳಿಯವರಾದ ಸಚಿನ್​ ಎಂಬುವವರು ಸಿಎಂಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಅರಸು ಬಳಿಕ ಅತಿಹೆಚ್ಚು ಸರ್ಕಾರಿ ಯೋಜನೆ ನೀಡಿದ್ದೀರಿ. ಬಡಜನರಿಗೆ ಅತಿ ಹೆಚ್ಚು ಯೋಜನೆ ನೀಡಿದ ಸಿಎಂ ನೀವು. ಬಡವರ, ದೀನ‌ ದಲಿತರ ಪರವಾಗಿರುವಂಥ ಸಿಎಂ ನೀವು. ಹಾಗಾಗಿ ರಾಜೀನಾಮೆ ನೀಡಬಾರದು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More