AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್

ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್

ದಿಲೀಪ್​, ಚೌಡಹಳ್ಳಿ
| Edited By: |

Updated on:May 12, 2026 | 9:51 PM

Share

ಕರ್ನಾಟಕದಲ್ಲಿ ತೀವ್ರ ಬಿಸಿಲಿನ ಬೇಗೆಯಿಂದ ಜನ ತತ್ತರಿಸಿದ್ದಾರೆ, ಇದು ಜೀವಜಲದ ಸಂಕಷ್ಟವನ್ನು ಹೆಚ್ಚಿಸಿದೆ. ಕಾವೇರಿ ನದಿಯ ಪ್ರಮುಖ ಜಲಾಶಯವಾದ ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ತೀವ್ರ ಕುಸಿದಿದೆ. ಮೈಸೂರಿನ ಆಸ್ಪತ್ರೆಗಳಲ್ಲಿ ನೀರಿನ ಕೊರತೆ, ಬೀದರ್‌ನಲ್ಲಿ ಗೋಡಂಬಿ ಬೆಳೆಗಾರರಿಗೆ ನಷ್ಟ ಉಂಟಾಗಿದೆ. ಮುಂಗಾರು ಮಳೆ ವಿಳಂಬವಾದರೆ ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗುವ ಆತಂಕ ಎದುರಾಗಿದೆ.

ಮಂಡ್ಯ, ಮೇ 12: ರಾಜ್ಯದ ಹಲವೆಡೆ ಮಳೆಯ ಕೊರತೆಯ ನಡುವೆ ತೀವ್ರ ಬಿಸಿಲಿನ ಬೇಗೆಯಿಂದ ಜನ ತತ್ತರಿಸಿದ್ದಾರೆ. ಇದು ಜೀವಜಲದ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಈ ಜಲಾಶಯವು ಒಟ್ಟು 49 TMC ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಆದರೆ, ಪ್ರಸ್ತುತ ಕೇವಲ 16 TMC ನೀರು ಮಾತ್ರ ಸಂಗ್ರಹವಾಗಿದೆ. ಇದರಲ್ಲಿ ಬಳಕೆಗೆ ಸಿಗುವುದು ಬರೀ 9 TMC ನೀರು ಮಾತ್ರ. ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಸರಿಯಾಗಿ ಆಗದಿದ್ದರೆ, ಕುಡಿಯುವ ನೀರಿಗೆ ದೊಡ್ಡ ಹಾಹಾಕಾರ ಶುರುವಾಗಲಿದೆ ಎಂಬ ಆತಂಕ ಎದುರಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 12, 2026 09:50 PM
Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More