AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ, ಅಧ್ಯಕ್ಷರ ವಿರುದ್ಧ ಆಕ್ರೋಶ!

ಮಂಡ್ಯ: ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ, ಅಧ್ಯಕ್ಷರ ವಿರುದ್ಧ ಆಕ್ರೋಶ!

ದಿಲೀಪ್​, ಚೌಡಹಳ್ಳಿ
| Edited By: |

Updated on: Jul 28, 2026 | 2:44 PM

Share

ಕೆ.ಆರ್.ಪೇಟೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ನ 'ಸಂಘಟನಾ ಸೃಜನ ಅಭಿಯಾನ' ಸಭೆಯಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ತಾಲೂಕಿನಲ್ಲಿ ಸ್ಪಂದಿಸುವ ನಾಯಕರೇ ಇಲ್ಲ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ ಜೆಡಿಎಸ್ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶಗೊಂಡ ಕಾರ್ಯಕರ್ತರು ನಾಯಕರನ್ನು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡರು.

ಮಂಡ್ಯ, ಜುಲೈ 28: ಕೆ.ಆರ್.ಪೇಟೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ನ ‘ಸಂಘಟನಾ ಸೃಜನ ಅಭಿಯಾನ’ ಸಭೆಯಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ತಾಲೂಕಿನಲ್ಲಿ ಸ್ಪಂದಿಸುವ ನಾಯಕರೇ ಇಲ್ಲ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ ಜೆಡಿಎಸ್ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶಗೊಂಡ ಕಾರ್ಯಕರ್ತರು ನಾಯಕರನ್ನು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡರು.

ಎಐಸಿಸಿ ವೀಕ್ಷಕ ಸೈಮನ್ ಅಲೆಕ್ಸ್ ಹಾಗೂ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಸಮ್ಮುಖದಲ್ಲೇ ಜಿಲ್ಲಾಧ್ಯಕ್ಷರನ್ನು ಬದಲಾಯಿಸುವಂತೆ ಪಟ್ಟು ಹಿಡಿದರು. ಹೊಸ ಅಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹಿಸಲು ಬಂದಿರುವುದಾಗಿ ನಾಯಕರು ಸಮಜಾಯಿಷಿ ನೀಡಿದರೂ ತಣ್ಣಗಾಗದ ಕಾರ್ಯಕರ್ತರ ಕೋಪದಿಂದಾಗಿ ಇಡೀ ಸಭೆಯು ಗಲಾಟೆ ಮತ್ತು ವಾಗ್ವಾದದಲ್ಲೇ ಅಂತ್ಯಗೊಂಡಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More