ಮಂಡ್ಯ: ಬಾಂಗ್ಲಾ ವಲಸಿಗರೆಂಬ ಶಂಕೆ; ಕೆಎಸ್‌ಆರ್‌ಟಿಸಿ ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು

Edited By:

Updated on: Aug 10, 2026 | 10:15 PM

ಮಂಡ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರೆಂದು ಶಂಕಿಸಿ ಹಿಂದೂ ಕಾರ್ಯಕರ್ತರು KSRTC ಬಸ್ ತಡೆದಿದ್ದಾರೆ. ಬೆಂಗಳೂರಿನಿಂದ ಕೊಡಗಿಗೆ ಹೊರಟಿದ್ದ 30 ಮಂದಿಯನ್ನು ತಡೆದು ಪರಿಶೀಲಿಸಲಾಯಿತು. ಪೊಲೀಸರು ಮತ್ತು ತಹಸೀಲ್ದಾರ್ ಮಧ್ಯಪ್ರವೇಶಿಸಿ, ಅವರು ಅಸ್ಸಾಂ ಮೂಲದವರೆಂದು ಕಂಡುಕೊಂಡರು. ಆದರೆ, ಅವರ ಗುರುತಿನ ಚೀಟಿಗಳು ಸ್ಕ್ಯಾನ್ ಆಗದ ಕಾರಣ, ಹೆಚ್ಚಿನ ಪರಿಶೀಲನೆಗಾಗಿ ಅವರನ್ನು ನಿರಾಶ್ರಿತ ಕೇಂದ್ರಕ್ಕೆ ಕರೆದೊಯ್ಯಲಾಗಿದೆ.

ಮಂಡ್ಯ, ಆಗಸ್ಟ್​​​ 10: ಮಂಡ್ಯದ ಬಸ್ ನಿಲ್ದಾಣದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಪ್ರಯಾಣಿಸುತ್ತಿದ್ದಾರೆಂಬ ಶಂಕೆ ಮೇಲೆ ಹಿಂದೂ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಬಸ್‌ ತಡೆದು ಪರಿಶೀಲನೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಬಸ್​​ನಲ್ಲಿ ಸುಮಾರು 30 ಜನರು ಬಾಂಗ್ಲಾ ಮೂಲದವರೆಂದು ಶಂಕಿಸಿ ಕಾರ್ಯಕರ್ತರು ಅಡ್ಡಗಟ್ಟಿದ್ದರಿಂದ ಸ್ಥಳಕ್ಕೆ ಪೊಲೀಸರು ಹಾಗೂ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ತಪಾಸಣೆ ವೇಳೆ ಇವರು ಕೊಡಗಿನ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕರು ಎಂಬುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಸದ್ಯ ಪೊಲೀಸರು ಎಲ್ಲರನ್ನು ನಿರಾಶ್ರಿತ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆ ಮೂಲಕ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಲು ಮುಂದಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More