AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗಾವಣೆ, ಟಿವಿ9 ವರದಿ ಬೆನ್ನಲ್ಲೇ ಕ್ರಮ

ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗಾವಣೆ, ಟಿವಿ9 ವರದಿ ಬೆನ್ನಲ್ಲೇ ಕ್ರಮ

ದಿಲೀಪ್​, ಚೌಡಹಳ್ಳಿ
| Edited By: |

Updated on: Aug 31, 2026 | 10:46 AM

Share

ಕೈದಿಗಳಿಗೆ ರಾಜಾತಿಥ್ಯ ಮತ್ತು ವಿಶೇಷ ಸೌಲಭ್ಯಗಳನ್ನು ನೀಡಿದ ಗಂಭೀರ ಆರೋಪದ ಮೇಲೆ ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ. ‘ಟಿವಿ9’ ನಿರಂತರ ವರದಿಯ ಬೆನ್ನಲ್ಲೇ ಡಿಜಿಪಿ ಅಲೋಕ್ ಕುಮಾರ್ ಈ ಆದೇಶ ಹೊರಡಿಸಿದ್ದಾರೆ. ಶಾಂತಮ್ಮ ಅವರ ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಮಂಡ್ಯ, ಆಗಸ್ಟ್ 31: ಕೈದಿಗಳಿಗೆ ರಾಜಾತಿಥ್ಯ ನೀಡಿದ ಗಂಭೀರ ಆರೋಪದ ಮೇಲೆ ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಅವರನ್ನು ತಕ್ಷಣವೇ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ. ಅಕ್ರಮದ ಬಗ್ಗೆ ‘ಟಿವಿ9’ ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ, ರಾಜ್ಯ ಡಿಜಿಪಿ ಅಲೋಕ್ ಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ. ಮಂಡ್ಯದ ಆಸ್ಪತ್ರೆಯಲ್ಲಿ ವಿಚಾರಣಾಧೀನ ಕೈದಿಗೆ ವಿಶೇಷ ರಾಜಾತಿಥ್ಯವನ್ನು ನೀಡಲಾಗಿತ್ತು. ಅಷ್ಟೇ ಅಲ್ಲದೆ, ಆಸ್ಪತ್ರೆಯಲ್ಲಿದ್ದಾಗ ಕೈದಿ ಹುಸೇನ್ ತನ್ನ ಗೆಳತಿಯೊಂದಿಗೆ ಸಿಕ್ಕಿಬಿದ್ದ ಘಟನೆಯೂ ಈ ಸಂದರ್ಭದಲ್ಲಿ ಬೆಳಕಿಗೆ ಬಂದಿತ್ತು. ಜೈಲಿನೊಳಗೆ ಕೈದಿಗಳಿಗಾಗಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲು ಪ್ರತ್ಯೇಕ ದರಗಳನ್ನು ನಿಗದಿಪಡಿಸಿದ್ದು ಕೂಡ ಈ ತನಿಖೆಯಲ್ಲಿ ಬಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More