ಮಂಡ್ಯ: 10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ರೆವೆನ್ಯೂ ಇನ್​ಸ್ಪೆಕ್ಟರ್

Edited By:

Updated on: Jun 13, 2026 | 7:14 AM

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ರೆವಿನ್ಯೂ ಇನ್ಸ್‌ಪೆಕ್ಟರ್‌ ಮಧುಸೂದನ್ 10,000 ರೂ.ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ರೈತ ನಂಜುಂಡಸ್ವಾಮಿ ಅವರಿಂದ ಪೋಡಿ ಕೆಲಸಕ್ಕಾಗಿ 2 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು, ಮುಂಗಡವಾಗಿ 10,000 ರೂ. ಪಡೆಯುತ್ತಿದ್ದಾಗ ರೆಡ್‌ ಹ್ಯಾಂಡ್ ಆಗಿ ಬಂಧಿಸಲಾಗಿದೆ.

ಮಂಡ್ಯ, ಜೂನ್ 13: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ರೆವಿನ್ಯೂ ಇನ್ಸ್‌ಪೆಕ್ಟರ್‌ (ಆರ್‌ಐ) ಮಧುಸೂದನ್ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅವರನ್ನು ಬಂಧಿಸಿದ್ದಾರೆ. ರೈತ ನಂಜುಂಡಸ್ವಾಮಿ ಅವರಿಂದ 10,000 ರೂ. ಮುಂಗಡ ಲಂಚ ಪಡೆಯುತ್ತಿದ್ದಾಗ, ಅಧಿಕಾರಿಗಳು ದಾಳಿ ಮಾಡಿ ರೆಡ್‌ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಪೋಡಿ (ಭೂ ದಾಖಲೆ ವಿಭಾಗ) ಕೆಲಸ ಮಾಡಿಕೊಡುವುದಕ್ಕಾಗಿ ಆರ್‌ಐ ಮಧುಸೂದನ್‌ ರೈತ ನಂಜುಂಡಸ್ವಾಮಿ ಅವರ ಬಳಿ ಒಟ್ಟು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರ ಮುಂಗಡ ಹಣವಾಗಿ 10,000 ರೂ. ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಹಲಗೂರಿನಲ್ಲಿ ಕಾರ್ಯಚರಣೆ ನಡೆಸಿದ್ದಾರೆ. ಲಂಚದ ಹಣವನ್ನು ಕೈಯಲ್ಲಿ ಸ್ವೀಕರಿಸಿ, ಅದನ್ನು ಜೇಬಿಗೆ ಹಾಕಿಕೊಳ್ಳುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಆರ್‌ಐ ಮಧುಸೂದನ್‌ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮಳವಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us