ಮಂಡ್ಯ: ಮದ್ದೂರು ಕಲ್ಲು ತೂರಾಟದ ಕಿಂಗ್​ಪಿನ್ ಯಾರು? ಕೊನೆಗೂ ಮಾಹಿತಿ ಬಹಿರಂಗ

Updated on: Sep 10, 2025 | 8:13 AM

ರಾಜ್ಯದಾದ್ಯಂತ ಸಂಚಲನಕ್ಕೆ ಕಾರಣವಾಗಿದ್ದ ಮದ್ದೂರು ಕಲ್ಲು ತೂರಾಟದ ಪ್ರಮುಖ ಆರೋಪಿ ಚನ್ನಪಟ್ಟಣದ ಇರ್ಫಾನ್ ಎಂಬುದು ಬಯಲಾಗಿದೆ. ಸಿಸಿಟಿವಿ ದೃಶ್ಯ ಸೇರಿದಂತೆ ವಿವಿಧ ಮಾಹಿತಿ ಕಲೆಹಾಕಿ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವು ವಿಚಾರಗಳು ಬಹಿರಂಗವಾಗಿವೆ. ಮಸೀದಿ ಮುಂದೆ ಗಣೇಶ ಮೆರವಣಿಗೆ ಸಹಿಸದೆ ಆತ ಕೃತ್ಯ ಎಸಗಿದ್ದ ಎನ್ನಲಾಗಿದೆ. ವಿವರಗಳಿಗೆ ವಿಡಿಯೋ ನೋಡಿ.

ಮಂಡ್ಯ, ಸೆಪ್ಟೆಂಬರ್ 10: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಕಿಂಗ್​ಪಿನ್ ಯಾರು ಎಂಬುದು ಬಯಲಾಗಿದೆ. ಚನ್ನಪಟ್ಟಣದ ಇರ್ಫಾನ್ ಎಂಬಾತನೇ ಕಲ್ಲು ತೂರಾಟದ ಕಿಂಗ್​ಪಿನ್ ಎಂಬುದು ತಿಳಿದುಬಂದಿದೆ. ಈತ ಹಲವು ವರ್ಷಗಳಿಂದ ಮದ್ದೂರಿನಲ್ಲೇ ಇದ್ದು, ಮಸೀದಿ ಮುಂದೆ ಗಣೇಶ ಮೆರವಣಿಗೆ ಬಗ್ಗೆ ಅಸಮಾಧಾನಗೊಂಡಿದ್ದ. ಆತನನ್ನು ಜಾಫರ್ ಎಂಬಾತ ಪ್ರಚೋದಿಸಿದ್ದ ಎನ್ನಲಾಗಿದೆ. ಈವರೆಗೆ ಪ್ರಕರಣ ಸಂಬಂಧ 22 ಮಂದಿಯನ್ನು ಬಂಧಿಸಲಾಗಿದೆ. ಏತನ್ಮಧ್ಯೆ, ಇಂದು ಮಂಡ್ಯದಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದ್ದು, ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More