ಮಂಡ್ಯ ಮದ್ದೂರಿನಲ್ಲಿ ಮತ್ತೆ ಕಲ್ಲು ತೂರಾಟ: ಪ್ರತಿಭಟನಾಕಾರರ ಅಟ್ಟಾಡಿಸಿ ಲಾಠಿ ಬೀಸಿದ ಪೊಲೀಸರು, ವಿಡಿಯೋ ನೋಡಿ
ಮಂಡ್ಯ ಜಿಲ್ಲೆಯ ಮದ್ದೂರಿನ ರಾಮ್ ರಹೀಮ್ ನಗರ ಸದ್ಯ ಪ್ರಕ್ಷುಬದ್ಧಗೊಂಡಿದೆ. ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲುತೂರಾಟ ಇದೀಗ ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದ್ದು, ಸೋಮವಾರ ಬೆಳಗ್ಗೆ ಭಾರಿ ಪ್ರತಿಭಟನೆ ನಡೆದಿದೆ. ಈ ವೇಳೆ ಮತ್ತೆ ಕಲ್ಲು ತೂರಾಟ ನಡೆದು, ಪೊಲೀಸರು ಲಾಠಿಚಾರ್ಜ್ ಮಾಡಿದರು. ಪ್ರತಿಭಟನಾಕಾರರನ್ನು ಪೊಲೀಸರು ಅಟ್ಟಾಡಿಸಿ ಹೊಡೆದ ವಿಡಿಯೋ ಇಲ್ಲಿದೆ.
ಮಂಡ್ಯ, ಸೆಪ್ಟೆಂಬರ್ 8: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಭಾನುವಾರ ರಾತ್ರಿ ಕಲ್ಲೆಸೆತ ನಡೆದಿರುವುದಕ್ಕೆ ಹಿಂದೂಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಘಟನೆ ಖಂಡಿಸಿ ಸೋಮವಾರ ಬೆಳಗ್ಗೆ ರಾಮ್ ರಹೀಮ್ ನಗರದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನ ಪ್ರತಿಭಟನೆ ನಡೆಸಿದರು. ಇದೇ ವೇಳೆ ಮತ್ತೆ ಕಲ್ಲು ತೂರಾಟ ನಡೆಯಿತು. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದರು.
