ಮಂಡ್ಯದಲ್ಲಿ ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ

Edited By:

Updated on: Sep 13, 2026 | 7:29 AM

ಮಂಡ್ಯದಲ್ಲಿ ಬೃಹತ್ ಗಣಪತಿ ಮೂರ್ತಿ ಅನಾವರಣ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್‌ಗೆ ತಲೆಗೆ ಗಾಯವಾಗಿದೆ. ಮೆರವಣಿಗೆಗೂ ಮುನ್ನ ಮೂರ್ತಿ ರಿವೀಲ್ ಮಾಡುತ್ತಿದ್ದಾಗ ಸ್ಕ್ರೀನ್ ಕೊಂಡಿ ಬಿದ್ದು ಈ ಘಟನೆ ಸಂಭವಿಸಿದೆ. ಅವರನ್ನು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಮಂಡ್ಯ, ಸೆಪ್ಟೆಂಬರ್​​ 13: ನಗರದ ಮರಿಗೌಡ ಬಡಾವಣೆಯಲ್ಲಿ ಬೃಹತ್ ಗಣಪತಿ ಮೂರ್ತಿ ಅನಾವರಣ ಕಾರ್ಯಕ್ರಮದ ವೇಳೆ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್‌ಗೆ ತಲೆಗೆ ಪೆಟ್ಟಾಗಿದೆ. ಗಣಪತಿ ಪ್ರತಿಷ್ಠಾಪನೆಗೂ ಮುನ್ನ ನಡೆದ ಮೆರವಣಿಗೆಗೆ ಸಿದ್ಧತೆ ನಡೆಯುತ್ತಿತ್ತು. ಮೆರವಣಿಗೆಗೂ ಮುನ್ನ ಗಣಪತಿ ಮೂರ್ತಿಯನ್ನು ರಿವೀಲ್ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿದ್ದ ಸ್ಕ್ರೀನ್‌ನ ಕೊಂಡಿ ನೇರವಾಗಿ ಶಾಸಕರ ತಲೆಗೆ ಬಡಿದಿದೆ. ಇದರಿಂದಾಗಿ ಅವರ ತಲೆಗೆ ಗಾಯವಾಗಿದೆ. ಘಟನೆ ನಡೆದ ಕೂಡಲೇ ಶಾಸಕ ರವಿಕುಮಾರ್ ಅವರನ್ನು ಮಂಡ್ಯದ ಖಾಸಗಿ ಆಸ್ಪತ್ರೆಗೆ ಕರದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More