Sumalatha Ambareesh: ಸಂಸದೆ ಸುಮಲತಾ ಅಂಬರೀಷ್ ಕಾಂಗ್ರೆಸ್​ನೆಡೆ ಪ್ರದರ್ಶಿಸುತ್ತಿರುವ ಮೃದು ಧೋರಣೆ ಅಚ್ಚರಿ ಹುಟ್ಟಿಸುತ್ತದೆ!

ಅರುಣ್​ ಕುಮಾರ್​ ಬೆಳ್ಳಿ

Updated on: May 29, 2023 | 4:36 PM

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕಾರ್ಡ್ ನೀಡದಿದ್ದರೆ ತಾವಲ್ಲ, ಜನರೇ ಪ್ರತಿಕ್ರಿಯಿಸುತ್ತಾರೆ ಎಂದು ಸುಮಲತಾ ಅಂಬರೀಷ್ ಹೇಳುತ್ತಾರೆ.

ಮಂಡ್ಯ: ರಾಜ್ಯ ವಿಧಾನಸಭಾ ಚುನಾವಣೆಗೆ (assembly polls) ಕೆಲ ದಿನಗಳ ಮೊದಲು ಬಿಜೆಪಿ ತಮ್ಮ ಬೆಂಬಲ ಸೂಚಿಸಿ ಪಕ್ಷದ ಅಭ್ಯರ್ಥಿಗಳ ಪ್ರಚಾರ ಕೂಡ ಮಾಡಿದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ (Sumalatha Ambareesh) ಅವರ ಕಾಂಗ್ರೆಸ್ ನೆಡೆ ಧೋರಣೆ ಮೃದುವಾಗುತ್ತಿದೆಯೇ? ಮಂಡ್ಯದ ದೊಡ್ಡರಸಿನಕೆರೆಯಲ್ಲಿ (Doddarasinakere) ಅವರು ಮಾತಾಡಿದ್ದನ್ನು ಕೇಳಿಸಿಕೊಂಡರೆ ಹಾಗನ್ನಿಸದಿರದು. ರಾಜ್ಯದ ಬಿಜೆಪಿ ನಾಯಕರೆಲ್ಲ 5 ಗ್ಯಾರಂಟಿಗಳ ಜಾರಿಗೆ ತಡವಾದರೆ, ಉಗ್ರ ಹೋರಾಟ, ಪ್ರತಿಭಟನೆ ನಡೆಸುವುದಾಗಿ ಹೇಳುತ್ತಿದ್ದರೆ, ಸುಮಲತಾ ಮಾತ್ರ ಸರ್ಕಾರ ಸಮಯ ಕೇಳಿದೆ, ಅವರಿಗೆ ಸಮಯ ನೀಡಬೇಕು, ಅವರು ಗ್ಯಾರಂಟಿ ಕಾರ್ಡ್ ನೀಡದಿದ್ದರೆ ತಾವಲ್ಲ, ಜನರೇ ಪ್ರತಿಕ್ರಿಯಿಸುತ್ತಾರೆ ಎಂದು ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.