Sumalatha Ambareesh: ಅಂಬರೀಷ್​ ಬಗ್ಗೆ ಮಾತನಾಡುತ್ತಾ ಸುಮಲತಾ ಭಾವುಕ; ವೇದಿಕೆಯಲ್ಲೇ ಕಣ್ಣೀರು ಹಾಕಿದ ಸಂಸದೆ

Updated on: Mar 27, 2023 | 10:09 PM

Ambareesh Memorial Inauguration: ಅಂಬರೀಷ್​ ಅವರು ಮಾಡಿದ ಜನಪರ ಕಾರ್ಯಗಳನ್ನು ಸುಮಲತಾ ನೆನಪಿಸಿಕೊಂಡಿದ್ದಾರೆ. ವೇದಿಕೆಯಲ್ಲಿ ಅವರು ಭಾವುಕರಾಗಿ ಮಾತನಾಡಿದ್ದಾರೆ.

ನಟ ಅಂಬರೀಷ್​ (Ambareesh) ಸವಿ ನೆನಪಿಗಾಗಿ ಬೆಂಗಳೂರಿನ ರೇಸ್​ ಕೋರ್ಸ್​ ರಸ್ತೆಗೆ ಅವರ ಹೆಸರು ಇಡಲಾಗಿದೆ. ಅಲ್ಲದೇ ಅವರ ಸ್ಮಾರಕವನ್ನು (Ambareesh Memorial) ಕೂಡ ಇಂದು (ಮಾರ್ಚ್​ 27) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದರು. ಅಂಬರೀಷ್​ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಇದರಿಂದ ಬಹಳ ಸಂತೋಷ ಆಗಿದೆ. ಅಂಬಿ ಸ್ಮಾರಕ ಉದ್ಘಾಟನೆ ಬಳಿಕ ಅವರ ಪತ್ನಿ ಸುಮಲತಾ ಅಂಬರೀಷ್​ (Sumalatha Ambareesh) ಅವರು ಮಾತನಾಡಿದರು. ಮಂಡ್ಯದಲ್ಲಿ ಅಂಬರೀಷ್​ ಮಾಡಿದ ಕೆಲಸಗಳನ್ನು ಸುಮಲತಾ ಮೆಲುಕು ಹಾಕಿದರು. ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡುವಾಗ ಅವರು ಭಾವುಕರಾದರು. ವೇದಿಕೆಯಲ್ಲೇ ಕಣ್ಣೀರು ಹಾಕಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Mar 27, 2023 10:09 PM
Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More