ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ವಿವಾದದ ಆಕ್ರೋಶ: ತಮಿಳುನಾಡು ಸಿಎಂ ವಿಜಯ್ ಸಿನಿಮಾ ಜನನಾಯಗನ್ ಪ್ರದರ್ಶನ ತಡೆಗೆ ಯತ್ನ

Edited By:

Updated on: Jul 30, 2026 | 12:39 PM

ಮಂಡ್ಯದಲ್ಲಿ ಕಾವೇರಿ ವಿವಾದ ಸಂಬಂಧ ಪ್ರತಿಭಟನೆ ಭುಗಿಲೆದ್ದಿದ್ದು, ತಮಿಳುನಾಡು ಮುಖ್ಯಮಂತ್ರಿ ವಿಜಯ್ ನಟಿಸಿರುವ ‘ಜನನಾಯಗನ್’ ಸಿನಿಮಾ ಪ್ರದರ್ಶನ ವೇಳೆ ಥಿಯೇಟರ್​​ಗೆ ಮುತ್ತಿಗೆ ಹಾಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ. ಸಿನಿಮಾ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ ಹರಿದು ಪ್ರತಿಭಟನೆ ನಡೆಸಿದ್ದಾರೆ. ಕಾವೇರಿ ನೀರು ತಮಿಳುನಾಡಿಗೆ ಬಿಡುವಂತೆ CWRC ಆದೇಶದ ಹಿನ್ನೆಲೆ ಮಂಡ್ಯ ಮಾತ್ರವಲ್ಲದೆ, ಕರ್ನಾಟಕದ ವಿವಿಧೆಡೆ ಪ್ರತಿಭಟನೆಗಳು ಜೋರಾಗಿವೆ.

ಮಂಡ್ಯ, ಜುಲೈ 30: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳ ಆಕ್ರೋಶ ತೀವ್ರಗೊಂಡಿದೆ. ನಗರದ ಗುರುಶ್ರೀ ಚಿತ್ರಮಂದಿರದಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ನಟಿಸಿರುವ ‘ಜನನಾಯಗನ್’ ಸಿನಿಮಾ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿ, ಚಿತ್ರಮಂದಿರಕ್ಕೆ ಮುತ್ತಿಗೆ ಹಾಕಲು ಸಂಘಟನೆಗಳು ಯತ್ನಿಸಿವೆ. ಕಾವೇರಿ ವಿಚಾರದಲ್ಲಿ ತಮಿಳುನಾಡು ಖ್ಯಾತೆ ತೆಗೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೂಡಲೇ ಸಿನಿಮಾ ಪ್ರದರ್ಶನ ರದ್ದು ಮಾಡುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಸಿನಿಮಾದ ಪೋಸ್ಟರ್ ಹರಿದು ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More