ಮಂಡ್ಯ: ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದ ಪ್ರತಿಭಟನಾಕಾರರು!

ಮಂಡ್ಯ: ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದ ಪ್ರತಿಭಟನಾಕಾರರು!

ಪ್ರಶಾಂತ್​ ಬಿ.
| Updated By: Ganapathi Sharma

Updated on: Nov 25, 2024 | 12:33 PM

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಕಾಡಅಂಕನಹಳ್ಳಿ ಗ್ರಾಮದಲ್ಲಿ ಎಂದಿನಂತೆಯೇ ಹಾಲು ಉತ್ಪಾಕದರು ಡೈರಿಗೆ ಹಾಲು ತಂದಿದ್ದಾರೆ. ಆದರೆ, ಡೈರಿಯಲ್ಲಿ ಹಾಲು ಖರೀದಿಸಿಲ್ಲ. ಸಚಿವ ಚಲುವರಾಯಸ್ವಾಮಿ ದ್ವೇಷದಿಂದ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿ ಅವರು ಹಾಲನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದ್ದಾರೆ.

ಮಂಡ್ಯ, ನವೆಂಬರ್ 25: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕಾಡಅಂಕನಹಳ್ಳಿ ಗ್ರಾಮದಲ್ಲಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಾಲು ಉತ್ಪಾದಕರು ಹತ್ತಾರು ಲೀಟರ್​​ ಹಾಲನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಟ್ಟೆ ಸೇರಬೇಕಿದ್ದ ನೂರಾರು ಲೀಟರ್ ಹಾಲು ಮಣ್ಣು ಪಾಲಾಗಿದೆ. ಗ್ರಾಮದ ಹಾಲು ಉತ್ಪಾದಕರ ಸಂಘವನ್ನು ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಕೊಟ್ಟಿರುವ ಸೂಚನೆ‌ಯಂತೆ ಸೂಪರ್ ಸೀಡ್ ಮಾಡಲಾಗಿದೆ ಎಂದು ಹಾಲು ಉತ್ಪಾದಕರು ಆರೋಪಿಸಿದ್ದಾರೆ. ಸಚಿವರು ದ್ವೇಷದಿಂದ ಹಾಲು ಖರೀದಿಸದಂತೆ ಮನ್ಮುಲ್​ಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಇಂದು ಡೈರಿಯಲ್ಲಿ ಹಾಲು ಖರೀದಿಸಿಲ್ಲ ಎಂದು ಆರೋಪಿಸಿದ ಹಾಲು ಉತ್ಪಾದಕರು ಹಾಲನ್ನು ರಸ್ತೆಗೆ ಚೆಲ್ಲಿ ಪ್ರತಿಭಟನೆ ಮಾಡಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ