ಮಂಡ್ಯ: ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಿಸಿದ ಪುನೀತ್ ಕೆರೆಹಳ್ಳಿ ತಂಡ

| Updated By: ಗಣಪತಿ ಶರ್ಮ

Updated on: Sep 04, 2024 | 9:01 AM

ಬೆಂಗಳೂರಿನಲ್ಲಿ ನಾಯಿ ಮಾಂಸ ಪೂರೈಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಲವು ವಾರಗಳ ಹಿಂದೆ ಸುದ್ದಿಯಾಗಿದ್ದ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಈ ಬಾರಿ ಅವರು ಹಾಗೂ ಅವರ ತಂಡದವರು ಮದ್ದೂರಿನಲ್ಲಿ ಆಕ್ರಮವಾಗಿ ಬೆಂಗಳೂರಿನ ಕಸಾಯಿಖಾನೆಗೆ ಸಾಗಿಸುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.

ಮಂಡ್ಯ, ಸೆಪ್ಟೆಂಬರ್ 4: ಬೆಂಗಳೂರಿನ ಕಸಾಯಿಖಾನೆಗೆ ಆಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ತಂಡ ರಕ್ಷಣೆ ಮಾಡಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಐಬಿ ಸರ್ಕಲ್ ಬಳಿ 30ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ನಂತರ ಪುನೀತ್ ಕೆರೆಹಳ್ಳಿ ಮದ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದರ ಅನ್ವಯ ವಾಹನದ ಚಾಲಕ ಮನ್ಸೂರು ಅಹಮ್ಮದ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಈಚರ್ ವಾಹನದಲ್ಲಿ ಆಕ್ರಮವಾಗಿ 30ಕ್ಕೂ ಹೆಚ್ಚು ಗೋವುಗಳ ಸಾಗಾಟ ಮಾಡಲಾಗುತ್ತಿತ್ತು. ಇದರ ಸುಳಿವು ದೊರೆತ ಪುನೀತ್ ಹಾಗೂ ತಂಡದವರು ಮದ್ದೂರಿನ ಐಬಿ ಸರ್ಕಲ್ ಬಳಿ ವಾಹನ ತಡೆದು‌ ಪರಿಶೀಲನೆ ನಡೆಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:58 am, Wed, 4 September 24

Follow us on