AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಆರ್‌ಸಿಬಿ ಅಭಿಮಾನಿ ಯುವಕರ ಹುಚ್ಚಾಟ: ಪೊಲೀಸರಿಂದ ಲಾಠಿ ಪ್ರಹಾರ!

ಮಂಡ್ಯದಲ್ಲಿ ಆರ್‌ಸಿಬಿ ಅಭಿಮಾನಿ ಯುವಕರ ಹುಚ್ಚಾಟ: ಪೊಲೀಸರಿಂದ ಲಾಠಿ ಪ್ರಹಾರ!

ದಿಲೀಪ್​, ಚೌಡಹಳ್ಳಿ
| Edited By: |

Updated on: Jun 01, 2026 | 8:56 AM

Share

ಮಂಡ್ಯದ ಸಂಜಯ ವೃತ್ತದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ಅತಿರೇಕಕ್ಕೆ ತಿರುಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಇಲ್ಲದ ಕಾರಣ ಯುವಕರು ಹೆದ್ದಾರಿಯ ಲಾರಿಗಳ ಮೇಲೆ ಹತ್ತಿ ಹುಚ್ಚಾಟ ಆಡಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಕೊನೆಗೆ ಲಾಠಿ ಪ್ರಹಾರ ನಡೆಸಿದ್ದಾರೆ. ಘಟನೆಯ ವಿಡಿಯೋ ಇಲ್ಲಿದೆ.

ಮಂಡ್ಯ, ಜೂನ್ 1: ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಗುಜರಾತ್ ಟೈಟನ್ಸ್ ವಿರುದ್ಧ ಜಯಭೇರಿ ಬಾರಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ ಬೆನ್ನಲ್ಲೇ ಸಕ್ಕರೆ ನಾಡು ಮಂಡ್ಯದಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ ಮೇರೆ ಮೀರಿತು. ನಗರದ ಪ್ರಮುಖ ಕೇಂದ್ರವಾದ ಸಂಜಯ ವೃತ್ತದಲ್ಲಿ ಜಮಾಯಿಸಿದ ನೂರಾರು ಆರ್‌ಸಿಬಿ ಅಭಿಮಾನಿಗಳು ಅತಿರೇಕದ ವರ್ತನೆ ತೋರಿದ್ದು, ಪರಿಸ್ಥಿತಿ ಕೈಮೀರಿದಾಗ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸಿದ್ದಾರೆ. ವಿಜಯೋತ್ಸವದ ಹಿನ್ನೆಲೆಯಲ್ಲಿ ಸಂಜಯ ವೃತ್ತದಲ್ಲಿ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಕೆಲವು ಯುವಕರು ಹಳೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸರಕು ಸಾಗಣೆ ಲಾರಿಗಳ ಮೇಲೆ ಏರಿ ಪ್ರಾಣದ ಹಂಗು ತೊರೆದು ಮೊಂಡಾಟ ಮೆರೆದರು. ಲಾರಿಗಳ ಚಲನೆಗೆ ಅಡ್ಡಿಪಡಿಸಿ ರಸ್ತೆಯಲ್ಲೇ ಅತಿರೇಕದ ಸಂಭ್ರಮಾಚರಣೆ ಮುಂದುವರಿಸಿದರು. ಸಾರ್ವಜನಿಕರ ಜೀವಕ್ಕೆ ಆಪತ್ತು ತರುವಂತೆ ವರ್ತಿಸಿದ ಜನರನ್ನು ಹತೋಟಿಗೆ ತರಲು ಪೊಲೀಸರು ಅಂತಿಮವಾಗಿ ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us