18 ಜನರ ಮೇಲೆ ಬೀದಿ ನಾಯಿಗಳ ದಾಳಿ; ಬೆಚ್ಚಿಬಿದ್ದ ಮಂಡ್ಯ ಜನ

Updated on: Sep 29, 2025 | 12:28 PM

ಮಂಡ್ಯದಲ್ಲಿ ಬೀದಿ ನಾಯಿಗಳ ಹಾವಳಿ ತೀರಾ ಹೆಚ್ಚಿದ್ದು, ಕಳೆದ ಮೂರು ದಿನಗಳಿಂದ ಈ ಬೀದಿ ನಾಯಿಗಳು ಬರೋಬ್ಬರಿ 18 ಜನರ ಮೇಲೆ ದಾಳಿ ನಡೆಸಿವೆ. ಈ ಘಟನೆಯಿಂದ ಇದೀಗ ಸಾವರ್ಜನಿಕರು ಬೀದಿಯಲ್ಲಿ ಓಡಾಡಲು ಭಯಪಡುತ್ತಿದ್ದಾರೆ. ಪ್ರತಿ ಬೀದಿಯಲ್ಲೂ ನಾಯಿಗಳ ಹಾವಳಿ ಹೆಚ್ಚಿದ್ದು, ಬೀದಿ ನಾಯಿಗಳನ್ನು ನಿಯಂತ್ರಿಸದ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯ, ಸೆಪ್ಟೆಂಬರ್‌ 29: ಬೀದಿ ನಾಯಿಗಳ (Stray dogs) ಹಾವಳಿ ತೀರಾ ಹೆಚ್ಚಾಗಿದ್ದು, ಬೀದಿ ನಾಯಿಗಳು ಜನರ ಮೇಲೆ ಅಟ್ಯಾಕ್‌ ಮಾಡುವಂತಹ ಸುದ್ದಿಗಳು ಪ್ರತಿನಿತ್ಯ ಕೇಳಿ ಬರುತ್ತಲೇ ಇರುತ್ತವೆ. ಅದೇ ರೀತಿ ಮಂಡ್ಯದಲ್ಲೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರ ಜೀವನಕ್ಕೆ ತೊಂದರೆ ಉಂಟಾಗುತ್ತಿದೆ. ಹೌದು ಕಳೆದ 3 ಮೂರು ದಿನಗಳಿಂದ ಬರೋಬ್ಬರಿ 18 ಜನರ ಮೇಲೆ ನಾಯಿಗಳು ದಾಳಿ ನಡೆಸಿದ್ದು, ಜನ ಬೀದಿಯಲ್ಲಿ ಓಡಾಡಲು ಭಯಪಡುತ್ತಿದ್ದಾರೆ. ಇನ್ನೂ ಬೀದಿ ನಾಯಿಗಳನ್ನು ನಿಯಂತ್ರಿಸಲು ಯಾವುದೇ ಕ್ರಮಗಳನ್ನು ಕೈಗೊಳ್ಳದ ಜಿಲ್ಲಾಡಳಿತ, ತಾಲೂಕ ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಜನ ಭಾರೀ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ