ಮಂಡ್ಯ ವಿವಿಯ ಯುವಸಂಭ್ರಮಕ್ಕೆ ವರುಣನ ಅಡ್ಡಿ: ಮಳೆ ಅಬ್ಬರಕ್ಕೆ ವೇದಿಕೆಯೇ ನೆಲಸಮ
ಮಂಡ್ಯದಲ್ಲಿ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯಿಂದ ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ನವ ವಸಂತ ಯುವಸಂಭ್ರಮ ಕಾರ್ಯಕ್ರಮ ರದ್ದಾಗಿದೆ. ಕಾರ್ಯಕ್ರಮಕ್ಕಾಗಿ ಹಾಕಿದ್ದ ಬೃಹತ್ ವೇದಿಕೆ ಕುಸಿದಿದ್ದು, ಶಾಸಕ ರವಿ ಗಣಿಗ ಸ್ಥಳ ಪರಿಶೀಲಿಸಿ ತಾತ್ಕಾಲಿಕವಾಗಿ ಮುಂದೂಡಿರುವುದಾಗಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 20,000 ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿತ್ತು.
ಮಂಡ್ಯ, ಏಪ್ರಿಲ್ 30: ನಿನ್ನೆ (ಏಪ್ರಿಲ್ 29) ರಾತ್ರಿ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ನವ ವಸಂತ ಯುವಸಂಭ್ರಮ ಕಾರ್ಯಕ್ರಮಕ್ಕೂ ಮಳೆ ಅಡ್ಡಿಯಾಗಿದೆ. ಕಳೆದ ರಾತ್ರಿ ಬೀಸಿದ ಬಿರುಗಾಳಿ ಸಹಿತ ಮಳೆಯಿಂದಾಗಿ ಕಾರ್ಯಕ್ರಮಕ್ಕಾಗಿ ನಿರ್ಮಿಸಿದ್ದ ಬೃಹತ್ ಪೆಂಡಾಲ್ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಪಡಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಶಾಸಕ ರವಿ ಗಣಿಗ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿಗಳ ನಿರೀಕ್ಷೆಗೆ ತಕ್ಕಂತೆ ಕಾರ್ಯಕ್ರಮವನ್ನು ಮುಂದೊಂದು ದಿನ ನಡೆಸುವ ಭರವಸೆ ನೀಡಿದ್ದಾರೆ. ಸದ್ಯಕ್ಕೆ, ತಾತ್ಕಾಲಿಕವಾಗಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
