AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಗಲಭೆ ಆರ್​ಎಸ್ಎಸ್, ಬಿಜೆಪಿ, ಜೆಡಿಎಸ್ ಹುನ್ನಾರ: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಗಂಭೀರ ಆರೋಪ

ನಾಗಮಂಗಲ ಗಲಭೆ ಆರ್​ಎಸ್ಎಸ್, ಬಿಜೆಪಿ, ಜೆಡಿಎಸ್ ಹುನ್ನಾರ: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಗಂಭೀರ ಆರೋಪ

ದಿಲೀಪ್​, ಚೌಡಹಳ್ಳಿ
| Edited By: |

Updated on: Sep 13, 2024 | 2:13 PM

Share

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಗಲಭೆ ಬಿಜೆಪಿ, ಆರ್​ಎಸ್​ಎಸ್​ ಹಾಗೂ ಜೆಡಿಎಸ್ ಹುನ್ನಾರ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ. ಎಂ ಲಕ್ಷ್ಮಣ ಇನ್ನೂ ಏನೇನು ಆರೋಪಗಳನ್ನು ಮಾಡಿದರು? ಇಲ್ಲಿದೆ ವಿಡಿಯೋ.

ಮೈಸೂರು, ಸೆಪ್ಟೆಂಬರ್ 13: ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಭೆ ಪೂರ್ವನಿಯೋಜಿತ. ಗಲಭೆಗೆ ಆರ್​ಎಸ್ಎಸ್, ಬಿಜೆಪಿ, ಜೆಡಿಎಸ್​ನವರು ಹುನ್ನಾರ ಮಾಡಿದ್ದರು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಆರ್​ಎಸ್ಎಸ್, ಬಿಜೆಪಿ, ಜೆಡಿಎಸ್​ ಸಂಚನ್ನು ವಿಫಲಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ನಾಗಮಂಗಲ ಪಟ್ಟಣದಲ್ಲಿ ಗಲಭೆ ಮಾಡಿ ಸ್ವಲ್ಪ ಮಟ್ಟಿಗೆ ಯಶಸ್ವಿಯಾಗಿದ್ದಾರೆ ಎಂದರು.

ಮೊದಲು ಮೈಸೂರಿನಲ್ಲಿ ಕೋಮು ಗಲಭೆ‌ಗೆ ಸಂಚು ಹೂಡಿದ್ದರು. ಅಲ್ಲಿ ಅವರ ಪ್ಲ್ಯಾನ್​ ವಿಫಲವಾಗಿದೆ‌. ನಾಗಮಂಗಲದಲ್ಲಿ ನಡೆದ ಕೃತ್ಯದಲ್ಲಿ ಶಾಮೀಲಾಗಿದ್ದು ಯುವಕರು. 20 ಜನ ಹಿಂದೂಗಳು, 30 ಜನ ಮುಸ್ಲಿಮರು ಭಾಗಿಯಾಗಿದ್ದಾರೆ. ಇದು ಆರ್​ಎಸ್​ಎಸ್, ಬಿಜೆಪಿ, ಜೆಡಿಎಸ್ ಪೂರ್ವ ನಿಯೋಜಿತ ಕೃತ್ಯ. ಈ ಕುರಿತು ಗೃಹ ಸಚಿವರು ದಾಖಲೆ ಬಿಡುಗಡೆ ಮಾಡಲಿದ್ದಾರೆ ಎಂದರು.

ನಾಗಮಂಗಲಕ್ಕೆ ಹೋಗಿ ಪ್ರಚೋದನಕಾರಿ ಹೇಳಿಕೆ ಕೊಟ್ಟಿದ್ದಾರೆ‌. ವಿಜಯೇಂದ್ರ, ಅಶೋಕ್​ ಒಂದು ಸಮುದಾಯವನ್ನು ಬೈದಿದ್ದಾರೆ. ಇವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಎಂ.ಲಕ್ಷ್ಮಣ ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More