ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ

| Updated By: ಗಣಪತಿ ಶರ್ಮ

Updated on: Sep 12, 2024 | 9:45 AM

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಬುಧವಾರ ಸಂಜೆ ನಡೆದ ಕಲ್ಲು ತೂರಾಟ ಹಾಗೂ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಎಸ್​​​ಪಿ ಮಲ್ಲಿಕಾರ್ಜುನ ಬಾಲದಂಡಿ ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನೆಂದು ಇಲ್ಲಿ ನೋಡಿ.

ಮಂಡ್ಯ, ಸೆಪ್ಟೆಂಬರ್ 12: ನಾಗಮಂಗಲ ಗಲಭೆ ಸಂಬಂಧ ಮಂಡ್ಯ ಎಸ್​​​ಪಿ ಮಲ್ಲಿಕಾರ್ಜುನ ಬಾಲದಂಡಿ ಪ್ರತಿಕ್ರಿಯೆ ನೀಡಿದ್ದು, ಇದುವರೆಗೂ ಘಟನೆ ಸಂಬಂಧ 46 ಜನರನ್ನ ವಶಕ್ಕೆ ಪಡೆದಿದ್ದೇವೆ. ಕೆಲವು ಸಿಸಿಟಿವಿ ಕ್ಯಾಮರಾ ಪರಿಶೀಲನೆ ಕೂಡ ಮಾಡುತ್ತಿದ್ದೇವೆ. ಸದ್ಯಕ್ಕೆ ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದಿದ್ದಾರೆ.

ಮೆರವಣಿಗೆಗೆ ಅನುಮತಿ ನೀಡಿದ್ದೆವು. ನಾವು ಭದ್ರತೆ ಕೂಡ ಕಲ್ಪಿಸಿದ್ದೆವು. ಮಸೀದಿ ಬಳಿ ಮೂರ್ತಿ ನಿಲ್ಲಿಸಿ ಸಮಯ ಕಳೆಯುತ್ತಿದ್ದರು. ಹೀಗಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಎರಡೂ ಕಡೆಯವರು ಕಲ್ಲು ತೂರಾಟ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದ್ದೇನು? ಇಲ್ಲಿದೆ ಸಮಗ್ರ ಮಾಹಿತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:44 am, Thu, 12 September 24

Follow us on