Mandya Violence: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟಕ್ಕೆ ಇಡೀ ಗ್ರಾಮದಲ್ಲಿ ಆತಂಕ ಆವರಿಸಿತ್ತು. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಈಗ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲಾಗಿದೆ. ಸೆಪ್ಟೆಂಬರ್ 14ರವರೆಗೆ ಸೆಕ್ಷನ್ 144 ಜಾರಿ ಮಾಡಿದ್ದೇವೆ. ಅಗತ್ಯಬಿದ್ದರೆ ಸೆಕ್ಷನ್ 144 ಮುಂದುವರಿಸಲಾಗುತ್ತೆ ಎಂದು ಟಿವಿ9ಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಮಂಡ್ಯ, ಸೆ.12: ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಟಿವಿ9ಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಇದೀಗ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿ ಇದೆ ಎಂದು ತಿಳಿಸಿದ್ದಾರೆ. ಎರಡ್ಮೂರು ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಸೆಪ್ಟೆಂಬರ್ 14ರವರೆಗೆ ಸೆಕ್ಷನ್ 144 ಜಾರಿ ಮಾಡಿದ್ದೇವೆ. ಅಗತ್ಯಬಿದ್ದರೆ ಸೆಕ್ಷನ್ 144 ಮುಂದುವರಿಸಲಾಗುತ್ತೆ ಎಂದು ಟಿವಿ9ಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದ ಬದರಿಕುಪ್ಪಲು ಬಳಿ ಸಂಜೆ 7 ಗಂಟೆ ಗಣೇಶ ಮೂರ್ತಿ ಮೆರವಣಿಗೆ ಮಾಡಲಾಯ್ತು. ಈ ವೇಳೆ ಯುವಕರು ತಮಟೆ, ಡೊಳ್ಳು, ಡಿಜೆ ಸೌಂಡಿಗೆ ಹಿಂದೂ ಯುವಕರು ಕುಣಿಯುತ್ತಾ, ಪಟಾಕಿ ಸಿಡಿಸಿ ಸಂಭ್ರಮಿಸಿದ್ರು. ಬದರಿಕೊಪ್ಪಲಿನಿಂದ ಮಂಡ್ಯ ಸರ್ಕಲ್ ಮಾರ್ಗವಾಗಿ ತೆರಳಿತ್ತು. ಯಾ ಅಲ್ಲಾ ಮಸೀದಿ ಮತ್ತು ದರ್ಗಾ ಮುಂಭಾಗದ ರಸ್ತೆಯತ್ತ ಮೆರವಣಿಗೆ ಹೊರಟಿತ್ತು. ಆಗ ಮಸೀದಿ ಮುಂದೆ ಮೆರವಣಿಗೆ ಬರದಂತೆ ಮಂಡ್ಯ ಸರ್ಕಲ್ನಲ್ಲೇ ಅನ್ಯಕೋಮಿನ ಯುವಕರು ತಡೆದಿದ್ದರು. ಆಗ ಪರಸ್ಪರ ಮಾತಿನ ಚಕಮಕಿ ನಡೆದಿತ್ತು.
ಇದಾದ ಬಳಿಕ ಗಣೇಶ ಮೂರ್ತಿ ಮೆರವಣಿಗೆ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ್ದಾರೆ. ಬಿಲ್ಡಿಂಗ್ ಮೇಲೂ ನಿಂತುಕೊಂಡು ಮನಬಂದಂತೆ ಕಲ್ಲು ತೂರಾಟ ನಡೆಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ