ನಾಗಮಂಗಲ: ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತದ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

Edited By:

Updated on: Sep 12, 2024 | 12:56 PM

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲು ತೂರಾಟ, ಗಲಭೆ ಇದೀಗ ರಾಜ್ಯ ಮಟ್ಟದಲ್ಲೇ ಚರ್ಚೆಗೆ ಗ್ರಾಸವಾಗಿದೆ. ಮತ್ತೊಂದೆಡೆ, ಗಲಭೆ ಕುರಿತ ಒಂದೊಂದೇ ಮಾಹಿತಿ ಹೊರಬೀಳುತ್ತಿವೆ. ಪ್ರತ್ಯಕ್ಷದರ್ಶಿಗಳು ಘಟನೆಯ ಭಿಕರತೆ ಬಗ್ಗೆ ‘ಟಿವಿ9’ ಜತೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಮಂಡ್ಯ, ಸೆಪ್ಟೆಂಬರ್ 12: ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಭೆ ರಾಜ್ಯ ರಾಜಕಾರಣದಲ್ಲೂ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಹಗರಗಣಗಳಿಂದ ಗಮನ ಸೆಳೆಯಲು ಸರ್ಕಾರವೇ ಇಂಥ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂಬ ಆರೋಪ ಒಂದೆಡೆ ಕೇಳಿಬಂದಿದ್ದರೆ, ಮತ್ತೊಂದೆಡೆ, ಅಲ್ಪಸಂಖ್ಯಾತರ ಅತಿಯಾದ ಓಲೈಕೆ ನೀತಿಯಿಂದ ಹೀಗಾಗುತ್ತಿದೆ ಎಂದು ಕೇಂದ್ರ ಸಚಿವರುಗಳಿಂದಲೇ ಟೀಕೆ ವ್ಯಕ್ತವಾಗಿದೆ. ಆದರೆ, ಪ್ರತಿಪಕ್ಷಗಳ ಆರೋಪಗಳನ್ನು ಅಲ್ಲಗಳೆದಿರುವ ಗೃಹ ಸಚಿವರು, ನಾಗಮಂಗಲದಲ್ಲಿ ಕೋಮು ಗಲಭೆ ನಡೆದಿಲ್ಲ. ಅಲ್ಲಿ ಸಂಭವಿಸಿದ್ದು ಆಕಸ್ಮಿಕ ಘಟನೆ ಎಂದಿದ್ದಾರೆ.

ಮತ್ತೊಂದೆಡೆ, ಬಿಜೆಪಿ ನಿಯೋಗ ಇಂದು ಸಂಜೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ. ಈ ಮಧ್ಯೆ, ಬುಧವಾರ ಸಂಜೆ ನಾಗಮಂಗಲದಲ್ಲಿ ಏನೇನಾಯ್ತು ಎಂಬುದನ್ನು ಪ್ರತ್ಯಕ್ಷದರ್ಶಿಗಳು ‘ಟಿವಿ9’ ಜತೆ ವಿವರಿಸಿದ್ದಾರೆ.

ಇದನ್ನೂ ಓದಿ: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದ್ದೇನು? ಇಲ್ಲಿದೆ ಸಮಗ್ರ ಮಾಹಿತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More