ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ಸಂಭವಿಸಿದ ಗಲಭೆಯ ಕುರಿತು ಮಾಹಿತಿ ಸಂಗ್ರಹಿಸಲು ಬಿಜೆಪಿ ರಚಿಸಿರುವ ಶಾಸಕ ಡಾ. ಅಶ್ವತ್ಥನಾರಾಯಣ ನೇತೃತ್ವದ ಸತ್ಯಶೋಧನಾ ಸಮಿತಿ ಸೋಮವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿತು. ನಂತರ ಅಶ್ವತ್ಥನಾರಾಯಣ ಅವರು ಹೇಳಿದ್ದೇನೆಂಬ ವಿಡಿಯೋ ಇಲ್ಲಿದೆ.
ಮಂಡ್ಯ, ಸೆಪ್ಟೆಂಬರ್ 16: ಮಂಡ್ಯ ಜಿಲ್ಲೆ ನಾಗಮಂಗಲ ಗಲಭೆ ಬಗ್ಗೆ ಸಮಗ್ರ ತನಿಖೆ ಆಗಬೇಕು. ಸಮಗ್ರ ತನಿಖೆಯಾಗಿ ಸತ್ಯಾಸತ್ಯತೆ ಹೊರಬರಬೇಕು ಎಂದು ಬಿಜೆಪಿ ಸತ್ಯಶೋಧನಾ ಸಮಿತಿಯ ನೇತೃತ್ವ ವಹಿಸಿರುವ ಶಾಸಕ ಡಾ. ಸಿಎನ್ ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಳಿಕ ‘ಟಿವಿ9’ ಜತೆ ಮಾತನಾಡಿದ ಅವರು, ನಾಗಮಂಗಲದ ಘಟನೆ ಹಿಂದಿರುವ ಕಾಣದ ಕೈಗಳ ಪತ್ತೆ ಮಾಡಬೇಕು. ಇದನ್ನು ತಿಳಿಯಲು ಸತ್ಯಶೋಧನಾ ಸಮಿತಿ ರಚನೆ ಮಾಡಿಕೊಂಡಿದ್ದೇವೆ ಎಂದರು.
ಘಟನೆ ಬಗ್ಗೆ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಕೇರಳದ ಇಬ್ಬರು ನಾಗಮಂಗಲ ಗಲಭೆಯಲ್ಲಿ ಶಾಮೀಲಾಗಿದ್ದಾರೆ. ಗಲಾಟೆಯಿಂದ ಹಾನಿಗೊಳಗಾದವರಿಗೆ ಸೂಕ್ತ ಪರಿಹಾರ ಸಿಗಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗಣೇಶ ಮೂರ್ತಿಯನ್ನೇ ಅರೆಸ್ಟ್ ಮಾಡುತ್ತಾರೆ ಅಂದರೆ ಅವರ ಮನಸ್ಥಿತಿ ಹೇಗಿದೆ? ಜನರಿಗೆ ನಿಜ ಏನೆಂಬುದನ್ನು, ಪರಿಸ್ಥಿತಿಯನ್ನು ತಿಳಿಸುವ ಕೆಲಸ ಆಗಬೇಕು ಎಂದು ಅವರು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:58 pm, Mon, 16 September 24