ಆತ್ಮಹತ್ಯೆಗೆ ಯತ್ನ: ಕಾವೇರಿ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿ ಕಾವೇರಿ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಸ್ಥಳೀಯರು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಮನೆಯಲ್ಲಿನ ಗಲಾಟೆಯಿಂದಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದರು. ಇದೀಗ ರಕ್ಷಣೆ ಮಾಡಲಾಗಿದೆ.
ಮಂಡ್ಯ, ಜುಲೈ 04: ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿ ಕಾವೇರಿ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ 19 ವರ್ಷದ ಯುವತಿಯನ್ನು (Girl) ಸ್ಥಳೀಯರ ಸಹಾಯದೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಮನೆಯಲ್ಲಿನ ಗಲಾಟೆಯಿಂದಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ, ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದರು. ರಕ್ಷಣೆ ನಂತರ ಆಕೆಯನ್ನು ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos