ಬಂಟ್ವಾಳ: ಅಂಗಡಿಗೆ ನುಗ್ಗಿದ ಕಾರು, ವೃದ್ಧೆ ಸಾವು

Edited By:

Updated on: Feb 25, 2025 | 11:04 AM

ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದಲ್ಲಿ ಕಾರು ಅಪಘಾತದಲ್ಲಿ 91 ವರ್ಷದ ವೃದ್ಧೆ ಸುಮತಿ ಮೃತಪಟ್ಟಿದ್ದಾರೆ. ಕಾರು ಚಾಲಕಿಯ ನಿಯಂತ್ರಣ ತಪ್ಪಿ ಅಂಗಡಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಯಗೊಂಡ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು, ಫೆಬ್ರವರಿ 25: ಕಾರು (Car) ಚಾಲಕಿಯ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಮೃಪಟ್ಟಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ. ವಾಮದಪದವು ನಿವಾಸಿ ಸುಮತಿ (91) ಮೃತ ವೃದ್ಧೆ. ಅಪಘಾತದ ಭೀಕರ ದೃಶ್ಯ ಅಂಗಡಿ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಶೋಭಾ ಎಂಬವರು ಕಾರು ಚಲಾಯಿಸುತ್ತಿದ್ದರು. ಕಾರು ಚಾಲಕಿಯ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದೆ. ಕಾರು ಮೊದಲಿಗೆ ಅಂಗಡಿ ಬಳಿ ಇದ್ದ ಗ್ರಾಹಕ ಲೂಯಿಸ್ ಡಿಕೋಸ್ತಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ, ಅಂಗಡಿ ಮುಂದೆ ಕೂತಿದ್ದ ವೃದ್ಧೆ ಸುಮತಿಯವರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ವೃದ್ಧೆ ಸುಮತಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ಕೂಡಲೆ ಮಂಗಳೂರು ಹೊರವಲಯದ ಖಾಸಗಿ ‌ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸುಮತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published on: Feb 25, 2025 11:02 AM
Follow Us
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More