ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ, ವಿಡಿಯೋ ವೈರಲ್

Edited By:

Updated on: Feb 17, 2025 | 10:56 AM

ಮಂಗಳೂರಿನ‌ ಎಮ್ಮೆಕೆರೆ ಬಳಿ ಫುಟ್​ಬಾಲ್ ಟೂರ್ನ್​​ಮೆಂಟ್ ನಡೆಯುತ್ತಿದ್ದಾಗ ಪ್ರೇಕ್ಷಕರ ಗ್ಯಾಲರಿ ಕುಸಿದುಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್, ಗಂಭೀರ ಪ್ರಮಾಣದ ಹಾನಿ, ಸಾವು-ನೋವು ಸಂಭವಿಸಿಲ್ಲ. ಘಟನೆಯ ದೃಶ್ಯಾವಳಿ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪ್ರೇಕ್ಷಕರ ಗ್ಯಾಲರಿ ಕುಸಿದ ವಿಡಿಯೋ ಇಲ್ಲಿದೆ ನೋಡಿ.

ಮಂಗಳೂರು, ಫೆಬ್ರವರಿ 17: ಫುಟ್ ಬಾಲ್ ಟೂರ್ನ್​ಮೆಂಟ್ ನಡೆಯುತ್ತಿದ್ದಾಗ ಪ್ರೇಕ್ಷಕರ ಗ್ಯಾಲರಿ ಕುಸಿದ ಘಟನೆ ಕೆಲವು ದಿನಗಳ ಹಿಂದೆ ಮಂಗಳೂರಿನ‌ ಎಮ್ಮೆಕೆರೆ ಬಳಿ ನಡೆದಿದೆ. ಫೆಬ್ರವರಿ 8 ರಂದು ರಾತ್ರಿ ನಡೆದ ಘಟನೆಯ ದೃಶ್ಯ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಬಿಎಸ್​ಎನ್​ಎಲ್ ವತಿಯಿಂದ ಆಯೋಜಿಸಿದ್ದ ಫುಟ್ ಬಾಲ್ ಟೂರ್ನ್​ಮೆಂಟ್ ವೇಳೆ ಘಟನೆ ಸಂಭವಿಸಿದೆ. ಅದೃಷ್ಟವಶಾತ್, ಪ್ರೇಕ್ಷಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಬೊಳಾರ್ ಸೂಪರ್ ಲೀಗ್​​ನಿಂದ ಫುಟ್ ಬಾಲ್ ಟೂರ್ನ್​ಮೆಂಟ್ ಆಯೋಜಿಸಲಾಗಿತ್ತು. ಗ್ಯಾಲರಿ ಬಿದ್ದ ಕೂಡಲೆ ಪ್ರೇಕ್ಷಕರು ಚಲ್ಲಾಪಿಲ್ಲಿಯಾದರು. ಸೀದಾ ಆಟದ ಮೈದಾನಕ್ಕೆ ನುಗ್ಗಿದರು. ನಂತರ ಅದನ್ನು ಸರಿಪಡಿಸಲು ಆಯೋಜಕರು ಒದ್ದಾಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More