ಮಂಗಳೂರು: ಜಲೀಲ್ ಹತ್ಯೆ ಪ್ರಕರಣ: ಸುರತ್ಕಲ್ನಲ್ಲಿ 144 ಸೆಕ್ಷನ್ ಜಾರಿ
ಚಾಕು ಇರಿದು ಅಬ್ದುಲ್ ಜಲೀಲ್ ಹತ್ಯೆ ಪ್ರಕರಣದ ನಂತರ ಮಂಗಳೂರು ನಗರ ಹೊರವಲಯದ ಸುರತ್ಕಲ್ ಸುತ್ತಮುತ್ತ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದ್ದು, 144 ಸೆಕ್ಷನ್ ಹಾಕಲಾಗಿದೆ.
ಮಂಗಳೂರು: ಕಾಟಿಪಳ್ಳದಲ್ಲಿ ಚಾಕು ಇರಿದು ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ (Abdul Jaleel Murder Case)ದ ನಂತರ ಮಂಗಳೂರು ನಗರ ಹೊರವಲಯದ ಸುರತ್ಕಲ್ (Surathkal) ಸುತ್ತಮುತ್ತ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದ್ದು, ಸದ್ಯ 144 ಸೆಕ್ಷನ್ ಹಾಕಲಾಗಿದೆ. ಮಂಗಳೂರಿನ ಸುರತ್ಕಲ್ ಸೇರಿದಂತೆ ಹಲವೆಡೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸುರತ್ಕಲ್, ಬಜ್ಪೆ, ಕಾವೂರು, ಪಣಂಬೂರು ವ್ಯಾಪ್ತಿಯಲ್ಲಿ ಇಂದಿನಿಂದ ಡಿ.27ರ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Dec 25, 2022 09:21 PM
Latest Videos