ಮಂಗಳೂರು ಅಪಘಾತ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್: ಉಳ್ಳಾಲದಲ್ಲಿ ಸ್ಕೂಟರ್‌ಗೆ ಪಿಕಪ್ ಡಿಕ್ಕಿ ಹೊಡೆಸಿ ಇಬ್ಬರ ಹತ್ಯೆ ; ಚಾಲಕನ ವಿರುದ್ಧ ಕೊಲೆ ಕೇಸ್
ಮಂಗಳೂರಿನ ಕೂರ್ನಡ್ಕದಲ್ಲಿ ನಡೆದ ಸ್ಕೂಟರ್ ಅಪಘಾತ ಪ್ರಕರಣ ಈಗ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಪಿಕಪ್ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರ ದಾರುಣ ಸಾವು ಅಪಘಾತವಲ್ಲ, ಉದ್ದೇಶಪೂರ್ವಕ ಕೊಲೆ ಎಂಬ ಆರೋಪ ಕೇಳಿಬಂದಿದೆ. ಮೃತ ಮೊಹಮ್ಮದ್ ಸಫ್ವಾನ್ ತಂದೆ ದೂರಿನ ಮೇರೆಗೆ ಕೊಣಾಜೆ ಪೊಲೀಸರು ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಚಾಲಕ ಪರಾರಿಯಾಗಿದ್ದಾನೆ.
ಮಂಗಳೂರು, ಅ.20: ಜಿಲ್ಲೆಯ ಉಳ್ಳಾಲ ತಾಲೂಕಿನ ಕೂರ್ನಡ್ಕದಲ್ಲಿ ಸ್ಕೂಟರ್‌ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪ್ರಕರಣದಲ್ಲಿ ಇದೀಗ ಮಹತ್ವದ ತಿರುವು ದೊರೆತಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದು, ಆರಂಭದಲ್ಲಿ ಇದೊಂದು ಅಪಘಾತ ಎಂದು ಭಾವಿಸಲಾಗಿತ್ತು. ಆದರೆ, ಇದು ಕೇವಲ ಅಪಘಾತವಲ್ಲ, ಬದಲಿಗೆ ಉದ್ದೇಶಪೂರ್ವಕ ಕೊಲೆ ಎಂದು ಆರೋಪಿಸಲಾಗಿದೆ. ಘಟನೆಯ ಬಳಿಕ ಹರಡಿದ ಆಡಿಯೋ ತುಣುಕುಗಳು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ಕೊಲೆಯ ಶಂಕೆಯನ್ನು ಬಲಪಡಿಸಿವೆ. ಮೃತಪಟ್ಟ ಯುವಕರಲ್ಲಿ ಒಬ್ಬರಾದ ಮೊಹಮ್ಮದ್ ಸಫ್ವಾನ್ ಅವರ ತಂದೆ ಇಸ್ಮಾಯಿಲ್ ಅವರು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪಿಕಪ್ ಚಾಲಕ ಹಫೀಜ್ ಅಲಿಯಾಸ್ ಅಪ್ಪಿ, ಘಟನೆಗೂ ಮುನ್ನ ಯುವಕರೊಂದಿಗೆ ಮಾತಿನ ಚಕಮಕಿ ನಡೆಸಿದ್ದ. ನಂತರ ಉದ್ದೇಶಪೂರ್ವಕವಾಗಿ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಕೊಲೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಪಘಾತದ ನಂತರ ಚಾಲಕ ಸ್ಥಳದಿಂದ ಪರಾರಿಯಾಗಿರುವುದು ಕೊಲೆ ಶಂಕೆ ಮತ್ತಷ್ಟು ಬಲಗೊಳಿಸಿದೆ. ಪೊಲೀಸರು ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

