ಮಂಗಳೂರು ಅಪಘಾತ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್: ಉಳ್ಳಾಲದಲ್ಲಿ ಸ್ಕೂಟರ್‌ಗೆ ಪಿಕಪ್ ಡಿಕ್ಕಿ ಹೊಡೆಸಿ ಇಬ್ಬರ ಹತ್ಯೆ ; ಚಾಲಕನ ವಿರುದ್ಧ ಕೊಲೆ ಕೇಸ್

Edited By:

Updated on: Oct 20, 2026 | 10:33 PM

ಮಂಗಳೂರಿನ ಕೂರ್ನಡ್ಕದಲ್ಲಿ ನಡೆದ ಸ್ಕೂಟರ್ ಅಪಘಾತ ಪ್ರಕರಣ ಈಗ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಪಿಕಪ್ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರ ದಾರುಣ ಸಾವು ಅಪಘಾತವಲ್ಲ, ಉದ್ದೇಶಪೂರ್ವಕ ಕೊಲೆ ಎಂಬ ಆರೋಪ ಕೇಳಿಬಂದಿದೆ. ಮೃತ ಮೊಹಮ್ಮದ್ ಸಫ್ವಾನ್ ತಂದೆ ದೂರಿನ ಮೇರೆಗೆ ಕೊಣಾಜೆ ಪೊಲೀಸರು ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಚಾಲಕ ಪರಾರಿಯಾಗಿದ್ದಾನೆ.

ಮಂಗಳೂರು, ಅ.20: ಜಿಲ್ಲೆಯ ಉಳ್ಳಾಲ ತಾಲೂಕಿನ ಕೂರ್ನಡ್ಕದಲ್ಲಿ ಸ್ಕೂಟರ್‌ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪ್ರಕರಣದಲ್ಲಿ ಇದೀಗ ಮಹತ್ವದ ತಿರುವು ದೊರೆತಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದು, ಆರಂಭದಲ್ಲಿ ಇದೊಂದು ಅಪಘಾತ ಎಂದು ಭಾವಿಸಲಾಗಿತ್ತು. ಆದರೆ, ಇದು ಕೇವಲ ಅಪಘಾತವಲ್ಲ, ಬದಲಿಗೆ ಉದ್ದೇಶಪೂರ್ವಕ ಕೊಲೆ ಎಂದು ಆರೋಪಿಸಲಾಗಿದೆ. ಘಟನೆಯ ಬಳಿಕ ಹರಡಿದ ಆಡಿಯೋ ತುಣುಕುಗಳು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ಕೊಲೆಯ ಶಂಕೆಯನ್ನು ಬಲಪಡಿಸಿವೆ. ಮೃತಪಟ್ಟ ಯುವಕರಲ್ಲಿ ಒಬ್ಬರಾದ ಮೊಹಮ್ಮದ್ ಸಫ್ವಾನ್ ಅವರ ತಂದೆ ಇಸ್ಮಾಯಿಲ್ ಅವರು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪಿಕಪ್ ಚಾಲಕ ಹಫೀಜ್ ಅಲಿಯಾಸ್ ಅಪ್ಪಿ, ಘಟನೆಗೂ ಮುನ್ನ ಯುವಕರೊಂದಿಗೆ ಮಾತಿನ ಚಕಮಕಿ ನಡೆಸಿದ್ದ. ನಂತರ ಉದ್ದೇಶಪೂರ್ವಕವಾಗಿ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಕೊಲೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಪಘಾತದ ನಂತರ ಚಾಲಕ ಸ್ಥಳದಿಂದ ಪರಾರಿಯಾಗಿರುವುದು ಕೊಲೆ ಶಂಕೆ ಮತ್ತಷ್ಟು ಬಲಗೊಳಿಸಿದೆ. ಪೊಲೀಸರು ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More