ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ

Edited By:

Updated on: Mar 29, 2025 | 1:12 PM

ಮಂಗಳೂರಿನ ಸೂರಲ್ಪಾಡಿ ಬಳಿ ಬಜರಂಗದಳ ಕಾರ್ಯಕರ್ತರಿಂದ ಅಕ್ರಮ ಗೋ ಸಾಗಾಟವನ್ನು ತಡೆದ ಘಟನೆ ನಡೆದಿದೆ. ಮೂಡಬಿದಿರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಪಿಕಪ್ ವಾಹನವನ್ನು ಚೇಸ್ ಮಾಡಿ 19 ಗೋವುಗಳನ್ನು ರಕ್ಷಿಸಲಾಗಿದೆ. ವಾಹನದಲ್ಲಿದ್ದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಮಂಗಳೂರು, ಮಾರ್ಚ್​ 29: ಮಂಗಳೂರಿನ ಸೂರಲ್ಪಾಡಿ ಬಳಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವುಗಳನ್ನು (Cow Rescue) ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ರಕ್ಷಣೆ ಮಾಡಲಾಗಿದೆ. ಬಜರಂಗದಳ ಕಾರ್ಯಕರ್ತರು ವಾಹನ ಚೇಸಿಂಗ್ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ವಾಹನದಲ್ಲಿದ್ದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಚೇಸಿಂಗ್​ ವಿಡಿಯೋ ಹೋಗಿದೆ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Mar 29, 2025 01:09 PM
Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More