ಮಂಗಳೂರು ಭಜರಂಗದಳ, ವಿಹೆಚ್ಪಿಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್ ಬಿಗಿ ಬಂದೋಬಸ್ತ್
ಈದ್ ಮಿಲಾದ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ನಲ್ಲಿ ಮೆರವಣಿಗೆ ನಡೆಯಲಿವೆ. ಆದರೆ, ಕೆಲ ಮುಸ್ಲಿಂ ಮುಖಂಡರು ಪ್ರಚೋದನಕಾರಿ ಹೇಳಿಕೆಯಿಂದ ಆಕ್ರೋಶಗೊಂಡ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಬಿ.ಸಿ.ರೋಡ್ ಚಲೋ ಕರೆ ನೀಡಿವೆ.
ಮಂಗಳೂರಿನಲ್ಲಿ ವಾತಾವರಣ ಪ್ರಕ್ಷುಬ್ಧಗೊಂಡಿದೆ. ಈದ್ ಮಿಲಾದ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ನಲ್ಲಿ ಇಂದು (ಸೆ.16) ಮೆರವಣಿಗೆ ನಡೆಯಲಿವೆ. ಆದರೆ ರವಿವಾರ ಸಂಜೆ ಕೆಲ ಮುಸ್ಲಿಂ ಮುಖಂಡರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಇದರಿಂದ ಆಕ್ರೋಶಗೊಂಡ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮುಖಂಡರು ಬಿ.ಸಿ.ರೋಡ್ ಚಲೋ ಕರೆ ನೀಡಿದ್ದಾರೆ. ಹೀಗಾಗಿ ನಗರದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದೆ. ಪೊಲೀಸರು ಬಿ.ಸಿ.ರೋಡ್ನಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ನಿಗದಿಕ್ಕಿಂತ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಸ್ಪಿ ಯತೀಶ್ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬಂದೋಬಸ್ತ್ ಮಾಡಲಾಗಿದೆ.
ಇದನ್ನೂ ಓದಿ: ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:41 am, Mon, 16 September 24