AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಸಾವಿನ ದವಡೆಯಿಂದ ಬೈಕ್ ಸವಾರ ಜಸ್ಟ್ ಮಿಸ್; ಭಯಾನಕ ವಿಡಿಯೋ ಸೆರೆ

ಮಂಗಳೂರು: ಸಾವಿನ ದವಡೆಯಿಂದ ಬೈಕ್ ಸವಾರ ಜಸ್ಟ್ ಮಿಸ್; ಭಯಾನಕ ವಿಡಿಯೋ ಸೆರೆ

ಅಶೋಕ್​ ಪೂಜಾರಿ
| Edited By: |

Updated on: Aug 31, 2025 | 9:17 AM

Share

ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ನಂತೂರಿನಲ್ಲಿ ಓರ್ವ ಬೈಕ್ ಸವಾರ ಹೊಂಡ ಗುಂಡಿಯ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡು ಬಿದ್ದಿದ್ದಾನೆ. ಆದರೆ ಹಿಂಬದಿಯಿಂದ ಬರುತ್ತಿದ್ದ ಬಸ್ಸಿನ ಚಾಲಕನ ಸಮಯಪ್ರಜ್ಞೆಯಿಂದ ಸಾವಿನಿಂದ ಪಾರಾಗಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ. ರಸ್ತೆಯ ಹದಗೆಟ್ಟ ಸ್ಥಿತಿಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು, ಆಗಸ್ಟ್​​ 31: ಬೈಕ್ ಸವಾರ (Biker) ಸಾವಿನ ದವಡೆಯಿಂದ ಜಸ್ಟ್ ಮಿಸ್ ಆಗಿರುವಂತಹ ಘಟನೆ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ನಂತೂರು ಎಂಬಲ್ಲಿ ನಡೆದಿದೆ. ಕಾರು ಓವರ್ ಟೇಕ್ ಮಾಡಿ ಮುಂದೆ ಹೋದ ಬೈಕ್​ ಸವಾರ ರಸ್ತೆಯಲ್ಲಿದ್ದ ಗುಂಡಿಯನ್ನು ನೋಡದೇ ನಿಯಂತ್ರಣ ಕಳೆದುಕೊಂಡಿದ್ದು, ಬೈಕ್ ಸಹಿತ ಸವಾರ ಬಿದ್ದಿದ್ದಾರೆ. ಅಷ್ಟರಲ್ಲೇ ಹಿಂಬದಿಯಿಂದ ಖಾಸಗಿ ಬಸ್​ವೊಂದು ಬರುತ್ತಿತ್ತು. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ.​​ ಘಟನೆಯ ವಿಡಿಯೋ ಬಸ್​ನಲ್ಲಿ ಅಳವಡಿಸಿದ್ದ ಕ್ಯಾಮೆರಾದಲ್ಲಿ ಸೆರೆ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More