ಮಂಗಳೂರು: ಸಾವಿನ ದವಡೆಯಿಂದ ಬೈಕ್ ಸವಾರ ಜಸ್ಟ್ ಮಿಸ್; ಭಯಾನಕ ವಿಡಿಯೋ ಸೆರೆ
ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ನಂತೂರಿನಲ್ಲಿ ಓರ್ವ ಬೈಕ್ ಸವಾರ ಹೊಂಡ ಗುಂಡಿಯ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡು ಬಿದ್ದಿದ್ದಾನೆ. ಆದರೆ ಹಿಂಬದಿಯಿಂದ ಬರುತ್ತಿದ್ದ ಬಸ್ಸಿನ ಚಾಲಕನ ಸಮಯಪ್ರಜ್ಞೆಯಿಂದ ಸಾವಿನಿಂದ ಪಾರಾಗಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ. ರಸ್ತೆಯ ಹದಗೆಟ್ಟ ಸ್ಥಿತಿಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು, ಆಗಸ್ಟ್ 31: ಬೈಕ್ ಸವಾರ (Biker) ಸಾವಿನ ದವಡೆಯಿಂದ ಜಸ್ಟ್ ಮಿಸ್ ಆಗಿರುವಂತಹ ಘಟನೆ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ನಂತೂರು ಎಂಬಲ್ಲಿ ನಡೆದಿದೆ. ಕಾರು ಓವರ್ ಟೇಕ್ ಮಾಡಿ ಮುಂದೆ ಹೋದ ಬೈಕ್ ಸವಾರ ರಸ್ತೆಯಲ್ಲಿದ್ದ ಗುಂಡಿಯನ್ನು ನೋಡದೇ ನಿಯಂತ್ರಣ ಕಳೆದುಕೊಂಡಿದ್ದು, ಬೈಕ್ ಸಹಿತ ಸವಾರ ಬಿದ್ದಿದ್ದಾರೆ. ಅಷ್ಟರಲ್ಲೇ ಹಿಂಬದಿಯಿಂದ ಖಾಸಗಿ ಬಸ್ವೊಂದು ಬರುತ್ತಿತ್ತು. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ. ಘಟನೆಯ ವಿಡಿಯೋ ಬಸ್ನಲ್ಲಿ ಅಳವಡಿಸಿದ್ದ ಕ್ಯಾಮೆರಾದಲ್ಲಿ ಸೆರೆ ಆಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.