ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ: ಮುಂದೇನಾಯ್ತು ನೋಡಿ

Edited By:

Updated on: Oct 10, 2026 | 4:08 PM

ಮಂಗಳೂರು ಹೊರವಲಯದ ಹಳೆಯಂಗಡಿಯಲ್ಲಿ ಖಾಸಗಿ ಬಸ್ಸಿಗೆ ಗಿಡುಗವೊಂದು ಬಡಿದು ಮುಂಭಾಗದ ವಿಂಡ್‌ಸ್ಕ್ರೀನ್ ಗಾಜು ಸಂಪೂರ್ಣ ಪುಡಿಯಾಗಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಚಾಲಕ ಹರೀಶ್ ಅವರು ಸಮಯಪ್ರಜ್ಞೆ ಮೆರೆದು, ಗೊಂದಲಗೊಳ್ಳದೆ ಬಸ್ಸನ್ನು ನಿಯಂತ್ರಿಸಿದ್ದಾರೆ. ಈ ಮೂಲಕ ಭಾರಿ ಅಪಘಾತವನ್ನು ತಪ್ಪಿಸಿ, ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರ ಪ್ರಾಣಾಪಾಯವನ್ನು ಯಶಸ್ವಿಯಾಗಿ ಉಳಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

ಮಂಗಳೂರು, ಅ.10: ರಾಷ್ಟ್ರೀಯ ಹೆದ್ದಾರಿಯಲ್ಲಿ ಪೂರ್ಣ ವೇಗದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಏಕಾಏಕಿ ಗಿಡುಗವೊಂದು ಬಡಿದ ಪರಿಣಾಮ ಬಸ್ಸಿನ ಮುಂಭಾಗದ ವಿಂಡ್ ಸ್ಕ್ರೀನ್ ಗಾಜು ಸಂಪೂರ್ಣ ಪುಡಿಯಾದ ಆಘಾತಕಾರಿ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿಯಲ್ಲಿ ನಡೆದಿದೆ. ಬಸ್ಸಿನ ಗಾಜು ಚೂರುಚೂರಾದರೂ ಎದೆಗುಂದದೆ ಚಾಲಕ ಸಮಯಪ್ರಜ್ಞೆ ಮೆರೆದು ಬಸ್ಸನ್ನು ನಿಯಂತ್ರಿಸಿದ್ದು, ಭಾರಿ ಅವಘಡವೊಂದು ತಪ್ಪಿದಂತಾಗಿದೆ. ಮಂಗಳೂರು ಕಡೆಯಿಂದ ಸಂಚರಿಸುತ್ತಿದ್ದ ಲಕ್ಷ್ಮಿ ಗಣೇಶ್ ಹೆಸರಿನ ಖಾಸಗಿ ಬಸ್ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಈ ವಿಚಿತ್ರ ಅಪಘಾತ ಸಂಭವಿಸಿದೆ. ಬಸ್ ವೇಗವಾಗಿ ಸಾಗುತ್ತಿದ್ದಾಗ ಎಲ್ಲಿಂದಲೋ ಹಾರಿಬಂದ ಗಿಡುಗ ನೇರವಾಗಿ ಬಸ್ಸಿನ ಚಾಲಕನ ಎದುರಿನ ಮುಂಭಾಗದ ಗಾಜಿಗೆ ರಭಸದಿಂದ ಬಡಿತ ನೀಡಿದೆ. ಬಡಿತದ ರಭಸಕ್ಕೆ ಬಸ್ಸಿನ ಮುಂಭಾಗದ ಗಾಜು ಸಂಪೂರ್ಣವಾಗಿ ಪುಡಿಯಾಗಿ ಚೂರುಚೂರಾಗಿದೆ. ಹಾರುವ ಹಕ್ಕಿ ಏಕಾಏಕಿ ಬಡಿದು ಮುಂಭಾಗದ ಗಾಜು ಪುಡಿಯಾದಾಗ ಸಾಮಾನ್ಯವಾಗಿ ಚಾಲಕರು ನಿಯಂತ್ರಣ ಕಳೆದುಕೊಳ್ಳುವ ಅಥವಾ ಗಾಬರಿಯಾಗುವ ಸಾಧ್ಯತೆ ಹೆಚ್ಚಿರುತ್ತದೆ. ಆದರೆ ಬಸ್ ಚಾಲಕ ಹರೀಶ್ ಅವರು ತಕ್ಷಣವೇ ವಿಚಲಿತರಾಗದೆ, ಶಾಂತಚಿತ್ತರಾಗಿ ಬಸ್ಸಿನ ಸ್ಟೀರಿಂಗ್ ನಿಯಂತ್ರಿಸಿ ವಾಹನವನ್ನು ಹೆದ್ದಾರಿ ಬದಿಯಲ್ಲಿ ಸುರಕ್ಷಿತವಾಗಿ ನಿಲ್ಲಿಸಿದ್ದಾರೆ. ಚಾಲಕ ಹರೀಶ್ ಅವರ ಈ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ ಹತ್ತಾರು ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಗಿಡುಗ ಬಡಿದು ಬಸ್ಸಿನ ಮುಂಭಾಗದ ಗಾಜಿಗೆ ಭಾರಿ ಹಾನಿಯಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More