AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು, ಭಯಾನಕ ವಿಡಿಯೋ ವೈರಲ್

ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು, ಭಯಾನಕ ವಿಡಿಯೋ ವೈರಲ್

ಅಶೋಕ್​ ಪೂಜಾರಿ
| Edited By: |

Updated on: Jan 03, 2026 | 2:55 PM

Share

ಮಂಗಳೂರಿನ ಮರಕಡದಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ನಿಯಂತ್ರಣ ಕಳೆದುಕೊಂಡು ಮನೆಯ ಆವರಣ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿನಿಮೀಯ ರೀತಿಯಲ್ಲಿ ನುಗ್ಗಿದ ಕಾರಿನಲ್ಲಿದ್ದವರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯರು ತಕ್ಷಣಕ್ಕೆ ನೆರವಿಗೆ ಧಾವಿಸಿ ರಕ್ಷಿಸಿದ್ದಾರೆ. ಅಪಘಾತದ ದೃಶ್ಯ ವೈರಲ್ ಆಗಿದೆ.

ಮಂಗಳೂರು, ಜ.3: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಮನೆಯೊಂದರ ಆವರಣ ಗೋಡೆಗೆ ಡಿಕ್ಕಿಯೊಡೆದಿದೆ.ಕಾರು ಸಿನಿಮೀಯ ರೀತಿಯಲ್ಲಿ‌ ನುಗ್ಗಿ ಬಂದಿದೆ. ಘಟನೆಯ ಭಯಾನಕ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಂಗಳೂರು ನಗರ ಹೊರವಲಯದ ಮರಕಡ ಎಂಬಲ್ಲಿ ಈ ಘಟನೆ ನಡೆದಿದೆ.ಕಾರಿನಲ್ಲಿದ್ದವರು ಪವಾಡ ಸಾದೃಶ್ಯವಾಗಿ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ತಕ್ಷಣ ಸ್ಥಳೀಯರು ಬಂದು ಕಾರಿನಲ್ಲಿದ್ದವರನ್ನು ಕಾಪಾಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More